12:13 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕ್ರಿಸ್ಮಸ್, ಹೊಸ ವರ್ಷಾಚರಣೆ: ಹೊಸ ಮಾರ್ಗಸೂಚಿಯಲ್ಲಿ ಏನಕ್ಕೆಲ್ಲ ನಿಷೇಧವಿದೆ ಗೊತ್ತಾ? 

23/12/2021, 23:53

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿ ಹೊಸ ಮಾರ್ಗಸೂಚಿ ಪ್ರಕಟಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಏನಿದೆ?:

ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿಕೊಂಡು ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ ಮಾಡಲು ಅವಕಾಶವಿದೆ. 

ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ.

ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ.

ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು.

ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು.

ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು.

ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ.

ಇತ್ತೀಚಿನ ಸುದ್ದಿ

ಜಾಹೀರಾತು