ಇತ್ತೀಚಿನ ಸುದ್ದಿ
ಕಾಂಗ್ರೆಸ್ ಸರಕಾರ ಉಡುಪಿ ಮಠವನ್ನು ಸ್ವಾಧೀನಕ್ಕೆ ಯತ್ನಿಸಿತ್ತು: ಮಾಜಿ ಸಚಿವ ಪ್ರಮೋದ್ ಮಧ್ವರಾಜ್
24/12/2021, 17:31
ಉಡುಪಿ(reporterkarnataka.com): ಕಾಂಗ್ರೆಸ್ ಸರಕಾರ ಆಡಳಿತದಲ್ಲಿದ್ದಾಗ ಉಡುಪಿ ಕೃಷ್ಣ ಮಠವನ್ನು ಸರಕಾರ ಸ್ವಾಧೀನಪಡಿಸಲು ಯತ್ನಿಸಿತ್ತು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಹೇಳಿದರು.
ಉಡುಪಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದ ಕಾಲದಲ್ಲಿ ಉಡುಪಿ ಶ್ರೀಕೃಷ್ಣ ಮಠವನ್ನು ಸರಕಾರದ ಸ್ವಾಧೀನಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆದಿತ್ತು. ಅದನ್ನು ಮೊದಲು ವಿರೋಧಿಸಿದವನು ನಾನೇ ಎಂದು ಸ್ಫೋಟಕ ಮಾಹಿತಿ ನೀಡಿದರು.
ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಶಾಸಕ ಕೆ. ರಘಪತಿ ಭಟ್ ಮಾತನಾಡಿ, ಕಾಂಗ್ರೆಸ್ ಸರಕಾರ ಇಂತಹ ಪ್ರಯತ್ನ ಯಾವಾಗಲೂ ಮಾಡುತ್ತಲೇ ಇತ್ತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಉಡುಪಿಗೆ ಹಲವು ಬಾರಿ ಬಂದರೂ ಉಡುಪಿ ಮಠಕ್ಕೆ ಭೇಟಿ ನೀಡಿರಲಿಲ್ಲ ಎಂದರು.













