9:09 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಳಸ ಪದವಿಪೂರ್ವ ಕಾಲೇಜು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ; ಭದ್ರಾ ನದಿಯಲ್ಲಿ  ಓರ್ವನ ಮೃತದೇಹ ಪತ್ತೆ

25/12/2021, 12:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಕಳಸ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಗುರುವಾರ ಕಾಣೆಯಾಗಿದ್ದು ಇದರಲ್ಲಿ ಒಬ್ಬನ ಮೃತದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಓರ್ವನ ಮತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಮೃತದೇಹ ಪತ್ತೆಯಾದವನು ಹಿರೇಬೈಲಿನ ಜೀವನ್ ದಾಸ್(16), ಕಾಣೆಯಾದನು ಹೆಮ್ಮಕ್ಕಿ ಗ್ರಾಮದ ನಿಕ್ಷೇಪ ಎಂದು ಗುರುತಿಸಲಾಗಿದೆ.

ಕಳಸ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಇಬ್ಬರೂ ಸ್ನೇಹಿತರಾಗಿದ್ದರು.ಗುರುವಾರ ಕಾಲೇಜಿಗೆಂದು ಮನೆಯಿಂದ ಬಂದವರು ರಾತ್ರಿಯಾದರೂ ಮನೆಗೆ ಹಿಂದಿರುಗದ ಹಿನ್ನಲೆಯಲ್ಲಿ ಪೋಷಕರು ಸಾಕಷ್ಟು ಹುಡುಕಾಟ ನಡೆಸಿದ್ದರು.

ಶುಕ್ರವಾರ ಕಳಸದ ಭದ್ರಾನದಿಯ ರುದ್ರಪಾದ ಎಂಬ ಪ್ರದೇಶದಲ್ಲಿ ವಿದ್ಯಾರ್ಥಿಗಳ ಬ್ಯಾಗ್,ಯೂನಿಫಾರ್ಮ್,ಚಪ್ಪಲಿ,ಮೊಬೈಲ್ ಗಳು ಕಂಡು ಬಂದ ಹಿನ್ನಲೆಯಲ್ಲಿ ನದಿಯಲ್ಲಿ ಹುಡುಕಾಟ ನಡೆಸಿದಾಗ ಜೀವನ್ ಎಂಬುವವನ ಮೃತದೇಹ ಪತ್ತೆಯಾಗಿದೆ. ಇನ್ನೊರ್ವನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು