11:48 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುರತ್ಕಲ್: ಬಿಹಾರ ಮೂಲದ ಎನ್ ಐಟಿಕೆ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ; ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು 

26/12/2021, 17:13

ಮಂಗಳೂರು(reporterkarnataka.com): ಎನ್ ಐಟಿಕೆ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್ (20)ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಭಾನುವಾರ ನಡೆದಿದೆ.

ವಿದ್ಯಾರ್ಥಿ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗುತ್ತಿದ್ದು, ತನಗೆ ನೌಕರಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಎಜುಕೇಶನ್ ಲೋನ್ ಮಾಡಿ ಕಲಿಯುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾನೆ. 

ಬೆಳಗ್ಗೆ 8 ಗಂಟೆಯ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಸಹಪಾಠಿಗಳು ಬೆಳಗ್ಗೆ 9 ಗಂಟೆಗೆ ಬಾಗಿಲು ಬಡಿದಾಗ ಆತ ಬಾಗಿಲು ತೆರೆಯಲಿಲ್ಲ. ಮತ್ತೆ 11 ಗಂಟೆಗೆ ಕಿಟಕಿ ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.

ಬಿಹಾರದ ಪಾಟ್ನಾದ ವಿದ್ಯಾರ್ಥಿಯಾದ ಈತನ ಹೆತ್ತವರಿಗೆ ವಿಷಯ ತಿಳಿಸಲಾಗಿದ್ದು, ತಾವು ಬಡವರು ಬಿಹಾರದಿಂದ ಬರಲು ತಮ್ಮಲ್ಲಿ ದುಡ್ಡಿಲ್ಲ. ಅಲ್ಲೇ ಮೃತದೇಹದ ಅಂತ್ಯಸಂಸ್ಕಾರ ನಡೆಸಿ ಎಂದು ತಿಳಿಸಿದ್ದರು. ಆದರೆ ಎನ್ ಐಟಿಕೆ ಉಪನ್ಯಾಸಕರ ಹಾಗೂ ವಿದ್ಯಾರ್ಥಿಗಳ ವೃಂದ ಸೇರಿ ಮೃತದೇಹವನ್ನು ಪಾಟ್ನಾಕ್ಕೆ ಕೊಂಡೊಯ್ಯುವ ವ್ಯವಸ್ಥೆ ಮಾಡಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮೃತ ಸೌರವ್ ​ ಇಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು