5:23 PM Tuesday26 - November 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ

ಇತ್ತೀಚಿನ ಸುದ್ದಿ

ಮಡಿಕೇರಿಯ ಮೇಕೇರಿಯಲ್ಲಿ ವಿಜಯ್ ದಿವಸ್:  10ನೇ ವರ್ಷದ ರಕ್ತದಾನ ಶಿಬಿರ          

26/12/2021, 20:04

ಮಡಿಕೇರಿ(reporterkarnataka.com): ಸ್ವಾಗತ ಯುವಕ ಸಂಘ ಮೇಕೇರಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮೇಕೇರಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 10ನೇ ವರ್ಷದ ರಕ್ತದಾನ ಶಿಬಿರ ನಡೆಸಲಾಯಿತು. 

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷೆ ಹಾಗೂ ಮಡಿಕೇರಿ ನಗರ ಸಭೆಯ ಅಧ್ಯಕ್ಷರಾದ ಅನಿತಾ ಪೂವಯ್ಯ ನೆರವೇರಿಸಿದರು. ರಕ್ತದಾನದ ಮಹತ್ವದ ಬಗ್ಗೆ ರಕ್ತನಿಧಿ ಕೇಂದ್ರದ ವೈದ್ಯರಾದ ಡಾ. ಕರುಂಬಯ್ಯ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಕಾಂಗೀರ ಸತೀಶ್  ಮಾತನಾಡಿ, ಈ ದೇಶ ಕಂಡ ಅಪ್ರತಿಮ ದೇಶಭಕ್ತ ಅಜಾತಶತ್ರು ಭಾರತರತ್ನ ಅಟಲ್ ಬಿಹಾರಿ ವಾಜಪೇಯಿಯವರ ಆದರ್ಶಗಳನ್ನೇ ಪ್ರೇರಣೆಯಾಗಿಯಾಗಿಸಿ ಸ್ಥಳೀಯ ಸ್ವಾಗತ ಯುವಕ ಸಂಘದ ಮೂಲಕ ನಡೆಸುತ್ತಿರುವ ರಕ್ತದಾನ ಶಿಬಿರ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಅಧ್ಯಕ್ಷತೆಯನ್ನು ಜಿಲ್ಲಾ ಯುವಕ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ , ಗೌರಿಶಂಕರ ದೇವಾಲಯದ ಟ್ರಸ್ಟಿ ಪಿ.ಎಂ. ದಾಮೋದರ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಫೀಕ್,ಮುಖ್ಯೋಪಾಧ್ಯರಾದ ಸಬೀತಾ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು,ಕಾಂಗೀರ ಕೀರ್ತನ್,ಹನೀಫ್,ಶುಭಾ ಭರತ್ ಉಪಸ್ಥಿತರಿದ್ದರು. 

ಯುವಕ ಸಂಘದ ಅಧ್ಯಕ್ಷ ಜೆ.ಹರೀಶ್ ಸ್ವಾಗತಿಸಿ.ಸದಸ್ಯ ಟಿ.ವಿ. ಲೋಕೇಶ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು