12:43 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಗೆ ಭಾರಿ ಸರ್ಜರಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಉಪಾಧ್ಯಕ್ಷರು

27/12/2021, 09:11

ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಈ ವೇಳೆ ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕರು ಮತ್ತು ವಿವಿಧ ಜಿಲ್ಲೆಗಳಿಗೆ ಪ್ರಭಾರಿಗಳನ್ನು ನೇಮಕ ಮಾಡಲಾಗಿದೆ.

ಲಕ್ಷ್ಮಣ ಸವದಿ ಜೊತೆಗೆ ಉಡುಪಿಯ ನಯನಾ ಗಣೇಶ್ ಅವರಿಗೂ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.

ಇನ್ನು ರಾಜ್ಯ ಮುಖ್ಯ ವಕ್ತಾರರಾಗಿದ್ದ ಕ್ಯಾ.ಗಣೇಶ್ ಕಾರ್ಣಿಕ್ ಅವರಿಗೆ ಅನಿವಾಸಿ ಭಾರತೀಯ ವಿಭಾಗದ ರಾಜ್ಯ ಸಂಚಾಲಕರ ಹುದ್ದೆ ನೀಡಲಾಗಿದೆ.

ಮೈಸೂರಿನ ಎಂ.ಜಿ ಗಣೇಶ್ ರಾಜ್ಯ ಮುಖ್ಯ ವಕ್ತಾರ, ಕೋಷ್ಠಗಳ ರಾಜ್ಯ ಸಹ ಸಂಯೋಜಕರಾಗಿ ಜಯತೀರ್ಥ ಕಟ್ಟಿ, ಕಾನೂನು ಪ್ರಕೋಷ್ಠ ರಾಜ್ಯ ಸಂಚಾಲಕರಾಗಿ ಎಚ್. ಯೋಗೇಂದ್ರ, ಸಹ ಸಂಚಾಲಕರಾಗಿ ವಿನೋದ್ ಪಾಟೀಲ್, ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಗೋವಿಂದ ಬಾಂಡೇಕರ್, ಸಹ ಸಂಚಾಲಕರಾಗಿ ನಾಗಪ್ಪ ಅಂಬಿ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ಬಸವರಾಜ ಮತ್ತಿಮೋಡ ಅವರನ್ನು ನೇಮಿಸಲಾಗಿದೆ.

ಮಂಡ್ಯ ಜಿಲ್ಲಾ ಪ್ರಭಾರಿಯಾಗಿ ಜಗದೀಶ್ ಹಿರೇಮನಿ, ಯಾದಗಿರಿ ಜಿಲ್ಲಾ ಪ್ರಭಾರಿಯಾಗಿ ಅಮರನಾಥ ಪಾಟೀಲ್, ದಾವಣಗೆರೆ ಜಿಲ್ಲಾ ಪ್ರಭಾರಿಯಾಗಿ ಶಿವಲಿಂಗಪ್ಪ, ಚಿತ್ರದುರ್ಗ ಜಿಲ್ಲಾ ಪ್ರಭಾರಿಯಾಗಿ ಪ್ರೇಮಕುಮಾರ್, ಬೆಂಗಳೂರು ಉತ್ತರ ಜಿಲ್ಲಾ ಪ್ರಭಾರಿಯಾಗಿ ಕೆವಿ ಶಿವಪ್ಪ, ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿ ಮುರಹರಗೌಡ, ವಿಜಯನಗರ ಜಿಲ್ಲಾ ಅಧ್ಯಕ್ಷರಾಗಿ ಚನ್ನಬಸವನಗೌಡ ಅವರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು