ಇತ್ತೀಚಿನ ಸುದ್ದಿ
ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ: ಆಮ್ ಆದ್ಮಿ ಪಾರ್ಟಿ ಮೇಲುಗೈ: ಬಿಜೆಪಿ, ಕಾಂಗ್ರೆಸ್ ಗೆ ಹಿನ್ನಡೆ
28/12/2021, 12:51
ಚಂಡೀಗಢ(reporterkarnataka.com):.ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) 14 ಸ್ಥಾನಗಳನ್ನು ಗೆಲ್ಲುವ ಮೂಲಕ ಅತೀ ದೊಡ್ಡ ಪಕ್ಷವಾಗಿ ಮೂಡಿ ಬಂದಿದೆ.
ಒಟ್ಟು 35 ಸ್ಥಾನಗಳ ಪೈಕಿ ಉಳಿದಂತೆ ಬಿಜೆಪಿ 12, ಕಾಂಗ್ರೆಸ್ 8 ಮತ್ತು ಶಿರೋಮಣಿ ಅಕಾಲಿದಳ 1 ಸ್ಥಾನ ಗೆದ್ದಿದೆ. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಪಕ್ಷದ ಹಿರಿಯ ನಾಯಕ ರಾಘವ್ ಚಡ್ಡಾ ಅವರು “ಜನರು ವರ್ಷಗಳಿಂದ ಬದಲಾವಣೆಗಾಗಿ ಹಂಬಲಿಸುತ್ತಿದ್ದಾಗ ಕೇಜ್ರಿವಾಲ್ ಅವರ ಆಡಳಿತದ ಮಾದರಿಯ ವಿಜಯ ಇದಾಗಿದೆ” ಎಂದು ಹೇಳಿದರು. ಮಹಾನಗರ ಪಾಲಿಕೆಯ 35 ವಾರ್ಡ್‌ಗಳಿಗೆ 9 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು.
ಬೆಳಗ್ಗೆ 9 ಗಂಟೆಗೆ ಮತ ಎಣಿಕೆ ಆರಂಭವಾಯಿತು. ಡಿಸೆಂಬರ್ 24 ರಂದು ನಡೆದ ಮತದಾನದ ಶೇಕಡಾವಾರು ಈ ವರ್ಷ ಶೇಕಡಾ 60.45 ರಷ್ಟು ಆಗಿತ್ತು. ಸಾಂಪ್ರದಾಯಿಕವಾಗಿ ಪ್ರತಿ ಐದು ವರ್ಷಗಳಿಗೊಮ್ಮೆ ನಡೆಯುವ ಪುರಸಭೆ ಚುನಾವಣೆ – ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನಡೆಯುತ್ತಿತ್ತು. ಆದರೆ ಈ ಬಾರಿ ಆಮ್ ಆದ್ಮಿ ಪಕ್ಷದ ಪ್ರವೇಶದಿಂದ ತ್ರಿಕೋನ ಸ್ಪರ್ಧೆ ನಡೆದಿತ್ತು .