3:15 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಬೀದಿ ವ್ಯಾಪಾರಿಗಳಿಂದ ಪಾಲಿಕೆ ಕಚೇರಿಗೆ ಮುತ್ತಿಗೆ: ನಿಯಮ ಮೀರಿ ಕಾರ್ಯಾಚರಣೆಗೆ ಭಾರಿ ಆಕ್ರೋಶ

29/12/2021, 18:23

ಮಂಗಳೂರು(reporterkarnataka.com) : ನಗರದಲ್ಲಿ ಬೀದಿಬದಿ ವ್ಯಾಪಾರಸ್ಥರ ಮೇಲೆ ಅಕ್ರಮ ದಾಳಿ ನಡೆಸಿ ಸೊತ್ತುಗಳನ್ನು ನಾಶಪಡಿಸಿರುವುದನ್ನು ಖಂಡಿಸಿ ಬುಧವಾರ  ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ದಿ ಸಂಘದ ನೇತೃತ್ವದಲ್ಲಿ 
ಮಂಗಳೂರು ಮಹಾನಗರಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆ ಉದ್ಘಾಟಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಕೋವಿಡ್ ನ ಸಂಕಷ್ಟದ ಕಾಲದಲ್ಲಿ  ತತ್ತರಿಸಿ ಹೋಗಿರುವ ಬಡ ಬೀದಿಬದಿ ವ್ಯಾಪಾರಿಗಳ ಮೇಲೆ  ದಾಳಿ ಮಾಡಿರುವುದು ಅಮಾನುಷ ಕೃತ್ಯವಾಗಿದೆ. ಹೃದಯ ಹೀನ ಅಧಿಕಾರಿಗಳು ಬಡಪಾಯಿ ವ್ಯಾಪಾರಿಗಳ ಮೇಲೆ ರಕ್ತ ಬೀಜಾಸುರರಂತೆ ಸೊತ್ತುಗಳನ್ನು ನಾಶ ಮಾಡಿದ್ದಾರೆ.

ಈ ರೀತಿಯ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಸಂಘದ ಗೌರವಧ್ಯಕ್ಷ  ಬಿ.ಕೆ.  ಇಮ್ತಿಯಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬೀದಿಬದಿ ವ್ಯಾಪಾರಕ್ಕೆ ಪೂರಕವಾಗಿ 2014ರಲ್ಲಿ ಕೇಂದ್ರ ಸರಕಾರ ಬೀದಿಬದಿ ವ್ಯಾಪಾರಿಗಳ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ ಜಾರಿಗೆ ತಂದಿದೆ ಮತ್ತು 2019 ರಲ್ಲಿ ಕರ್ನಾಟಕ ಸರಕಾರ ಅಧಿನಿಯಮಗಳನ್ನು ಜಾರಿಗೆ ತಂದಿದೆ. ಅದರಂತೆ ಮಂಗಳೂರಿನಲ್ಲಿ ಪೂರ್ಣ ಪ್ರಮಾಣದ ಪಟ್ಟಣ ವ್ಯಾಪಾರ ಸಮಿತಿ ಅಸ್ತಿತ್ವಕ್ಕೆ ಬಂದಿದೆ. ಕಾಯಿದೆಯ ಪ್ರಕಾರ ಕಾರ್ಯಾಚರಣೆ ನಡೆಸಬೇಕಿದ್ದರೆ  ಪಟ್ಟಣ ವ್ಯಾಪಾರ ಸಮಿತಿಯಲ್ಲಿ  ಚರ್ಚಿಸಿ ನಿರ್ಣಯ ಮಾಡಬೇಕಾಗುತ್ತದೆ. ಆದರೆ ಇಲ್ಲಿ ನಿಯಮಗಳನ್ನು ಗಾಳಿಗೆ ತೂರಿ ದಾಳಿ ನಡೆದಿದೆ. ಸರಕಾರದ ಗುರುತಿನ ಚೀಟಿ ಹೊಂದಿರುವವರ  ಸೊತ್ತುಗಳನ್ನು ನಾಶ ಮಾಡಿ ದರ್ಪ ತೋರಿದ್ದಾರೆ.

ಕಾನೂನು ಮೀರಿ ದಾಳಿ ಮಾಡಿದವರ ಮೇಲೆ ಕ್ರಿಮಿನಲ್ ಕೇಸುಗಳನ್ನು ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ, ಡಿವೈಎಫ್ಐ  ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ಕೋಶಾಧಿಕಾರಿ ಆಸೀಫ್ ಮಂಜನಾಡಿ, ಮಾಜಿ ಕಾರ್ಯದರ್ಶಿ ಸಂತೋಷ್ ಆರ್. ಎಸ್ ಸಂಘದ ಅಧ್ಯಕ್ಷ ಮೊಹಮ್ಮದ್ ಮುಸ್ತಫಾ ಅವರು ಹೋರಾಟ ಬೆಂಬಲಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಮುಖಂಡರಾದ ಚೆರಿಯೋನು ಸುರತ್ಕಲ್, ಖಾಜಾ ಮೊಯಿನುದ್ದಿನ್, ಶ್ರೀಧರ, ಆನಂದ, ಬೇಬಿ,  ನಜೀರ್, ನೌಶಾದ್, ನಿತಿನ್ ಬಂಗೇರ ಉಪಸ್ಥಿತರಿದ್ದರು 

ಪ್ರತಿಭಟನೆಗೆ ಮಣಿದ ನಗರ ಪಾಲಿಕೆ ಅಧಿಕಾರಿಗಳು: ಅನಿರ್ಧಿಷ್ಟಾವಧಿ ಹೋರಾಟಕ್ಕೆ ತಯಾರಿ ನಡೆಸಿಕೊಂಡು ಹೋರಾಟಕ್ಕೆ ಇಳಿದಿದ್ದ ಬೀದಿಬದಿ ವ್ಯಾಪಾರಿಗಳ  ಒತ್ತಾಯಕ್ಕೆ ಮಣಿದ ನಗರಪಾಲಿಕೆ ಪಾಲಿಕೆಯ ಪ್ರಭಾರ ಆಯುಕ್ತರು ಆಗಿರುವ ಮೂಡಾ ಆಯುಕ್ತರನ್ನು  ಪ್ರತಿಭಟನಾ ಸ್ಥಳಕ್ಕೆ ಕಳುಹಿಸಿ ಕಾರ್ಯಾಚರಣೆಯನ್ನು ಹಿಂಪಡೆಯುವ ತೀರ್ಮಾನವನ್ನು ಪ್ರಕಟಿಸಿದರು. ವಶಪಡಿಸಲಾದ ಸರಕುಗಳನ್ನು ವಾಪಸ್ ನೀಡುವುದು ಮತ್ತು ಹಾನಿ ಮಾಡಲಾದ ವಸ್ತುಗಳಿಗೆ ಪರಿಹಾರ ನೀಡುವ ಬಗ್ಗೆ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು