8:29 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಪೂವಮ್ಮಗೆ ಕಂಕಣ ಭಾಗ್ಯ: ಕೇರಳದ ಅಥ್ಲೀಟ್ ಜಿತಿನ್ ಜತೆ ಸಪ್ತಪದಿ

29/12/2021, 19:53

ಮಂಗಳೂರು(reporterkarnataka.com): ಏಷ್ಯನ್ ಗೇಮ್ಸ್ ಸ್ವರ್ಣ ಪದಕ ವಿಜೇತೆ ಹಾಗೂ ಒಲಂಪಿಯನ್, ಕರ್ನಾಟಕದ ಅಥ್ಲೀಟ್ ಎಂ.ಆರ್.ಪೂವಮ್ಮ ಅವರು ಕೇರಳದ ಅಥ್ಲೀಟ್ ಜಿತಿನ್ ಜೊತೆ ಬುಧವಾರ ಮಂಗಳೂರಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಮಂಗಳೂರಿಗೆ ಹೊರ ವಲಯದ ಅಡ್ಯಾರ್ ಗಾರ್ಡನ್‌ನ ವಿ. ಕೆ. ಶೆಟ್ಟಿ ಸಭಾಂಗಣದಲ್ಲಿ ಕೊಡವ ಸಾಂಪ್ರದಾಯಿಕ ಶೈಲಿಯಲ್ಲಿ ವಿವಾಹ ನೆರವೇರಿತು. ಪೂವಮ್ಮ ಅವರ ತಂದೆ ಮಚ್ಚೆಟ್ಟಿರ ಜಿ.ತಮ್ಮಯ್ಯ(ರಾಜು), ತಾಯಿ ಜಾನಕಿ (ಜಾಜಿ), ಜಿತಿನ್ ಅವರ ತಾಯಿ ಜಾನ್ಸಿ ಸೇರಿದಂತೆ ಕುಟುಂಬಸ್ಥರು, ಬಂಧುಮಿತ್ರರು, ಕ್ರೀಡಾಪಟುಗಳು ಹಾಗೂ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ. 

ಕೊಡಗು ಮೂಲದ ೩೧ ವರ್ಷದ ಪೂವಮ್ಮ ಅವರು ೨೦೧೪ರಲ್ಲಿ ಇಂಚೋನ್ ಏಷ್ಯಾಡ್‌ನಲ್ಲಿ ೧ ಚಿನ್ನ, ೧ ಕಂಚು ಮತ್ತು ೨೦೧೮ರ ಜಕಾರ್ತ ಏಷ್ಯಾಡ್‌ನಲ್ಲಿ ೨ ಚಿನ್ನ ಪದಕ ಗೆದ್ದಿದ್ದರು.  ಜ.೧ರಂದು ಪೂವಮ್ಮರ ಪತಿ ಜಿತಿನ್ ಅವರ ಊರು ಕೇರಳದ ತ್ರಿಶೂರಿನಲ್ಲಿ ಮತ್ತೊಂದು ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು