ಇತ್ತೀಚಿನ ಸುದ್ದಿ
ಬಾಳೆಹೊನ್ನೂರು: ಭೀಕರ ರಸ್ತೆ ಅಪಘಾತಕ್ಕೆ ಮಹಿಳೆ ಸಾವು; ಇಬ್ಬರು ಗಂಭೀರ
29/12/2021, 22:12

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಕೊಪ್ಪ ತಾಲೂಕಿನ ಸೀಗೋಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗೀತಾ(28) ಎಂಬವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ.
ಇತರ ಮೂವರಿಗೆ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಮಾರತಹಳ್ಳಿ ಮೂಲದವರು ಶೃಂಗೇರಿಯಿಂದ ಬೆಂಗಳೂರಿಗೆ ವಾಪಸ್ ಹೋಗುವಾಗ ಅಪಘಾತ ನಡೆದಿದೆ. ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.