7:08 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮೇಕೆದಾಟು ನಾವು ಮಾಡಿಯೇ ಮಾಡ್ತೀವಿ, ಕಾಂಗ್ರೆಸ್ ಪಾದಯಾತ್ರೆ ಬೇಕಾಗಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

03/01/2022, 22:37

ಮಂಗಳೂರು(reporterkarnataka.com): ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ನ ಅತ್ಯಂತ ಹೀನ ರಾಜಕಾರಣ. ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಇವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು. ಜನರನ್ನು ದಾರಿ ತಪ್ಪಿಸಿ ಜನರನ್ನು ಕೊಲ್ಲುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು,ಇವತ್ತು ಎಚ್ಚರಿಕೆ ತೆಗೋಳುವ ಕೆಲಸ ಆಗಬೇಕು, ಕಾರ್ಯಕಾರಿಣೆಯಲ್ಲಿ 800 ಜನರನ್ನು ನಾವು 300 ಕ್ಕೆ ಇಳಿಸಿದೆವು.ಸರ್ಕಾರದ ನಿಯಮದ ಪ್ರಕಾರ ನಮ್ಮ ಬೇರೆ ಚಟುವಟಿಕೆಗಳನ್ನು ನಿಲ್ಲಿಸೋಕೂ ಯೋಚನೆ ಮಾಡಿದ್ದೇವೆ.

ಮೇಕೆದಾಟು ರಾಜಕಾರಣ ಮಾಡ್ತಿದಾರೆ, ನಿಮ್ಮದೇ ಸರ್ಕಾರ ಮತ್ತು ನಿಮ್ಮದೇ ಮುಖ್ಯಮಂತ್ರಿ ಇರಲಿಲ್ವಾ? ಆಗ ನೀವು ಮೇಕೆದಾಟು ಬಗ್ಗೆ ಚರ್ಚೆ ಮಾಡಲಿಲ್ಲ, ತಯಾರಿ ಮಾಡಲಿಲ್ಲ ಇವತ್ತು ನಮ್ಮ ಸರ್ಕಾರ ಸಂಪೂರ್ಣ ಬದ್ದತೆ ಹೊಂದಿದೆ.ನಾವು ಮೇಕೆದಾಟು ಮಾಡಿಯೇ ಮಾಡ್ತೀವಿ, ನಮ್ಮ ಕಾಲದಲ್ಲೇ ಅದು ಆಗುತ್ತೆ. ಅದಕ್ಕೆ ಈ ಕಾಂಗ್ರೆಸ್ ಪಾದಯಾತ್ರೆ ಅಗತ್ಯ ಖಂಡಿತಾ ಇಲ್ಲ

ರಾಜ್ಯದಲ್ಲಿ ಪಾದಯಾತ್ರೆ ಮಾಡಿ ಕೊರೋನಾ ಹೆಚ್ಚು ಮಾಡಲು ನೋಡ್ತಿದಾರೆ. ಇದರಿಂದ ಖಂಡಿತಾ ಕೊರೋನಾ ಹೆಚ್ಚಳವಾಗುತ್ತೆ, ಇದಕ್ಕೆ ಕಾಂಗ್ರೆಸ್ ಹೊಣೆಗಾರರಾಗುತ್ತೆ ಎಂದು ಅವರು ಎಚ್ಚರಿಸಿದರು.

ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದೆ.ಸರ್ಕಾರ ಮುನ್ನೆಚ್ಚರಿಕೆಗಾಗಿ ಹಲವು ಗೈಡ್ ಲೈನ್ ಗಳನ್ನ ತರುತ್ತೆ. ಲಾಕ್ ಡೌನ್ ಇಲ್ಲ, ತಜ್ಞರ ವರದಿ ಅಧಾರದಲ್ಲಿ ಕೋವಿಡ್ ನಿಯಂತ್ರಿಸ್ತಾರೆ. ಜನರೇ ಸ್ವಯಂ ಆಗಿ ಈ ಕೋವಿಡ್ ನಿಯಂತ್ರಣ ಮಾಡಬೇಕಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು