ಇತ್ತೀಚಿನ ಸುದ್ದಿ
ಮಂಗಳೂರು: 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾಕರಣಕ್ಕೆ ಚಾಲನೆ
04/01/2022, 16:56
ಮಂಗಳೂರು(reporterkarnataka.com): ನಗರದ ರಥಬೀದಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 15-18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಲಸಿಕಾಕರಣಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಶಾಸಕರಾದ ಡಿ. ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೋರೇಟರ್ ಜೀನತ್, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಡಿಎಚ್ ಒ ಡಾ. ಕಿಶೋರ್ ಕುಮಾರ್, ಆರ್.ಸಿ.ಎಚ್.ಒ ಡಾ. ರಾಜೇಶ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.