12:58 PM Wednesday27 - November 2024
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್  ಇಲ್ಲ: ಆದರೆ ಇನ್ನಷ್ಟು ಕಠಿಣ ಕ್ರಮದ ಸಾಧ್ಯತೆ

04/01/2022, 22:16

ಬೆಂಗಳೂರು(reporterkarnataka.com):

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಜಾರಿ ಮಾಡುವ ಸಾಧ್ಯತೆ ಇಲ್ಲ.

ಸೋಮವಾರ ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ಕೂಡ ನಡೆದಿದ್ದು, ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್​ಡೌನ್ ಇಲ್ಲ ಎಂದು ತಿಳಿದುಬಂದಿದೆ.

ಸಿಎಂ ನೇತೃತ್ವದ ನಡೆಯುವ ಸಭೆಯಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವುದರ ಜೊತೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.  ಇಂದು ಹೊಸ ಮಾರ್ಗಸೂಚಿಯನ್ನ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿದು ಬಂದಿದೆ.

ಸೋಂಕು ಹರಡುವಿಕೆ ಶೇ.5 ರ ಪ್ರಮಾಣ ದಾಟಿದರೆ ಮಾತ್ರ ಲಾಕ್‌ಡೌನ್ ಎಂಬ ಕಠಿಣ ಕ್ರಮಕ್ಕೆ ನಿರ್ಧರಿಸೋಣ. ಇಲ್ಲವಾದ್ರೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಬಳಿ ಚರ್ಚಿಸಿ, ಟಫ್‌ರೂಲ್ಸ್ ಮಾತ್ರ ಜಾರಿಗೆ ತರೋಣ ಎಂಬ ನಿರ್ಧಾರಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು