8:58 AM Wednesday17 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ವೀಕೆಂಡ್ ಕರ್ಪ್ಯೂನಲ್ಲಿ ಮದ್ಯ ಮಾರಾಟ ನಿಷೇಧ

06/01/2022, 18:10

ಬೆಂಗಳೂರು( reporterkarnataka.com): ರಾಜ್ಯ ಸರ್ಕಾರವು ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ. ವೀಕೆಂಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ ಎಂದು ಅಬಕಾರಿ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸರ್ಕಾರವು ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ.

ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲ.ಹೀಗಾಗಿ ವೀಕೆಂಡ್ ನಲ್ಲಿ ಮದ್ಯ ಸಿಗಲ್ಲ. ಮದ್ಯ ಬೇಕು ಅಂದ್ರ ಸೋಮವಾರದವರೆ ಕಾಯಲೇಬೇಕು.

ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್​ಲೈನ್​ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್​ಲೈನ್ ವಿಧಾನದಲ್ಲಿ ನಡೆಯುತ್ತದೆ. ಇಂದಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್​ಗಳಲ್ಲಿ ಪಾರ್ಸೆಲ್​, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ.

ಇತ್ತೀಚಿನ ಸುದ್ದಿ

ಜಾಹೀರಾತು