12:50 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳ ಅಭಿವೃದ್ಧಿ: ಶಾಸಕ ವೇದವ್ಯಾಸ ಕಾಮತ್

07/01/2022, 08:26

ಮಂಗಳೂರು(reporterkarnataka.com): ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಣಗೊಳಿಸಿ ಕ್ಷೇತ್ರದ ಎಲ್ಲಾ ವರ್ಗದ ಮಕ್ಕಳಿಗೂ ಶಿಕ್ಷಣ ನೀಡುವ ಯೋಚನೆಯಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಈಗಾಗಲೇ ನವೀಕರಣಗೊಂಡ‌ ಶಾಲೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು. 

ಮಂಗಳೂರು ಮಹಾನಗರ ಪಾಲಿಕೆಯ ಕಣ್ಣೂರು ವಾರ್ಡಿನ ದಯಾಂಬು ಸರಕಾರಿ ಪ್ರೌಢಶಾಲೆಯಲ್ಲಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರಕಾರಿ ಶಾಲೆಗಳ ಅಭಿವೃದ್ಧಿಯಿಂದ ಬಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಸಹಕಾರ ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿಯುತ್ತದೆ ಎಂದು ಹೇಳಿದರು. 

ಪಾಲಿಕೆ ಮುಖ್ಯ ಸಚೇತಕ ಸುಧೀರ್ ಶೆಟ್ಟಿ ಕಣ್ಣೂರು ಅವರು ಮಾತನಾಡಿ, ದಯಾಂಬು ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರನ್ನು ಮನವಿ ಸಲ್ಲಿಸಿದ್ದ ಸಂದರ್ಭದಲ್ಲಿ ಪೂರಕವಾಗಿ ಸ್ಪಂದಿಸಿದ ಅವರು ತಕ್ಷಣವೇ 35 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದರು. 35 ಲಕ್ಷ ರೂಪಾಯಿಯಲ್ಲಿ ತರಗತಿ ಕೊಠಡಿಗಳು ಮತ್ತು ಶೌಚಾಲಯ ನಿರ್ಮಾಣ ಮಾಡಲಾಗಿದೆ. ಶಾಲೆಯ ಅಭಿವೃದ್ಧಿಯಿಂದ ಈ ಭಾಗದ ಮಕ್ಕಳಿಗೆ ಹೆಚ್ಚಿನ ಸೌಲಭ್ಯ ಒದಗಿಸಲಾಗಿದೆ ಎಂದರು. 

ಸಭಾಧ್ಯಕ್ಷತೆ ವಹಿಸಿಕೊಂಡಿದ್ದ ಸ್ಥಳೀಯ ಕಾರ್ಪೋರೇಟರ್ ಚಂದ್ರಾವತಿ ವಿಶ್ವನಾಥ್ ಅವರು, ದಯಾಂಬು ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಶಾಸಕರ ಪ್ರಯತ್ನದಿಂದ ಸಮೀಪದಲ್ಲಿ ಅಂಗನವಾಡಿ ನಿರ್ಮಾಣವೂ ಆಗುತ್ತಿದೆ. ಈ ಪರಿಸರದ ಮಕ್ಕಳ ವಿಧ್ಯಾಭ್ಯಾಸಕ್ಕೆ ಶಾಲೆಯ ಅಭಿವೃದ್ಧಿಯ ಅನಿವಾರ್ಯತೆಯನ್ನು ಮನಗಂಡು ಅನುದಾನ ಒದಗಿಸಿದ ಶಾಸಕರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. 

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಗೀತಾನಂದ ಶೆಟ್ಟಿ, ದೇವದಾಸ್ ಶೆಟ್ಟಿ, ಯಶವಂತ್ ವೀರನಗರ, ಸುನಿಲ್ ಕೊಡಕ್ಕಲ್, ಜಗದೀಶ್ ಕೊಟ್ಟಾರಿ ಬಲ್ಲೂರು, ಇಕ್ಬಾಲ್ ಬಲ್ಲೂರುಗುಡ್ಡೆ, ಎಸ್.ಡಿ ಶಾಕಿರ್ ದಯಾಂಬು, ಕಬೀರ್ ಬಲ್ಲೂರುಗುಡ್ಡೆ, ಕಟ್ಟಡ ನಿರ್ಮಾಣಕ್ಕೆ ಸ್ಥಳ ಒದಗಿಸಿದ ಹಾಜಿ ಮಹಮ್ಮದ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಅಹಮ್ಮದ್ ಬಾವಾ, ದಯಾಂಬು ಮಸೀದಿಯ ಅಧ್ಯಕ್ಷರಾದ ಮೊಹಮ್ಮದ್, ಶಿಕ್ಷಣ ಇಲಾಖೆಯ ಅಧಿಕಾರಿ ಪ್ರಶಾಂತ್,  ಪ್ರೌಢಶಾಲಾ ಮುಖ್ಯ ಶಿಕ್ಷಕ ಪೌಲ್ ರೋಡ್ರೀಗಸ್ ಸ್ವಾಗತಿಸಿ, ಹರಿಣಾಕ್ಷಿ ನಿರೂಪಿಸಿದರು, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ಭಾಯಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು