9:03 AM Thursday31 - October 2024
ಬ್ರೇಕಿಂಗ್ ನ್ಯೂಸ್
ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು…

ಇತ್ತೀಚಿನ ಸುದ್ದಿ

ಮಂಗಳೂರು: ವೀಕೆಂಡ್ ಕರ್ಫ್ಯೂ,  ಕೊರೊನಾ ನಿರ್ಬಂಧ ವಿರೋಧಿಸಿ ಪ್ರತಿಭಟನಾ ಪ್ರದರ್ಶನ

07/01/2022, 15:17

ಮಂಗಳೂರು(reporterkarnataka.com): ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ಹಾಗೂ ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ದೂಡಿದ ರಾಜ್ಯ ಸರ್ಕಾರದ ವಿರುದ್ಧ ಸಿಪಿಎಂ ನೇತೃತ್ವದಲ್ಲಿ ನಗರದಲ್ಲಿಂದು ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಜ್ಯ ಸರಕಾರದ ಅವೈಜ್ಞಾನಿಕ ಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬೊಮ್ಮಯಿ ನೇತೃತ್ವದ ಬಿಜೆಪಿ ಸರಕಾರ ಹೆಜ್ಜೆಹೆಜ್ಜೆಗೂ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಅದರ ಜೊತೆಗೆ ತನ್ನ ಕೋಮುವಾದಿ ಅಜೆಂಡಾವನ್ನು ಜಾರಿಗೊಳಿಸಿ ಜನರ ಗಮನವನ್ನು ಬೇರೆಡೆಗೆ ಸೆಲೆಯಲು ಯತ್ನಿಸುತ್ತಿದೆ. ಮಾತ್ರವಲ್ಲದೆ ಸರಕಾರದ ವಿರುದ್ಧ ಭುಗಿಲೆದ್ದ ಜನಾಕ್ರೋಶವನ್ನು ಶಮನ ಮಾಡಲು ಕೊರೊನಾವನ್ನು ಮುಂದಿಟ್ಟುಕೊಂಡು ಕೀಳು ಮಟ್ಟದ ರಾಜಕೀಯ ನಡೆಸುತ್ತಿದೆ ಎಂದು ಟೀಕಿಸಿದರು.

ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಮುನೀರ್ ಕಾಟಿಪಳ್ಳ ಮಾತನಾಡಿ, ರಾಜ್ಯದ ಜನತೆಯ ಬದುಕಿನ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಸರಕಾರವು ಅಧಿಕಾರ ನಡೆಸಲು ಅಯೋಗ್ಯ. ಅಂದು ಭ್ರಷ್ಟಾಚಾರದ ವಿರುದ್ಧ ಬೊಗಳೆ ಬಿಟ್ಟವರು ಇಂದು 40% ಕಮಿಷನ್ ಪಡೆಯುವ ಸರಕಾರವೆಂದು ತನ್ನವರಿಂದಲೇ ಕರೆಸಿಕೊಂಡಿದೆ ಎಂದು ವ್ಯಂಗ್ಯವಾಡಿದರು.

ಪ್ರಾಸ್ತಾವಿಕವಾಗಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಮಾತನಾಡಿ,ಕುಲಗೆಟ್ಟ ರಾಜಕಾರಣ ಹಾಗೂ ಜನರ ಪ್ರಾಣದಲ್ಲಿ ಚೆಲ್ಲಾಟವಾಡುವ ಮೆಡಿಕಲ್ ಮಾಫಿಯಾಗಳ ಸಮ್ಮಿಶ್ರಣವು ಇಡೀ ಜಗತ್ತನ್ನು ತನ್ನ ಕಪಿಮುಷ್ಠಿಯಲ್ಲಿಟ್ಟು ಕೊರೊನಾ ಹೆಸರಿನಲ್ಲಿ ರಾಜಕೀಯ ನಡೆಸುತ್ತಿದೆ. ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳಿಗಾಗಿ ಜನರ ಹಿತವನ್ನು ಬಲಿ ಕೊಡುವ ಕೇಂದ್ರ ಸರ್ಕಾರದ ವಿರುದ್ಧವೂ ಜನತೆ ತಿರುಗಿ ಬೀಳುತ್ತಿದ್ದಾರೆ ಎಂದು ಹೇಳಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ.ಬಾಲಕೃಷ್ಣ ಶೆಟ್ಟಿ, ಸುಕುಮಾರ್  ಅವರು ಮಾತನಾಡಿ, ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ನಾಯಕರಾದ ಸದಾಶಿವದಾಸ್, ಜಯಂತ ನಾಯಕ್,ಬಶೀರ್ ಪಂಜಿಮೊಗರು, ಸಂತೋಷ್ ಬಜಾಲ್,ಯೋಗೀಶ್ ಜಪ್ಪಿನಮೊಗರು, ಬಿ.ಕೆ.ಇಮ್ತಿಯಾಜ್,ಜಯಂತಿ ಶೆಟ್ಟಿ, ಸಿಐಟಿಯು ಜಿಲ್ಲಾ ನಾಯಕರಾದ ರಾಧಾ ಮೂಡಬಿದ್ರೆ, ಗಿರಿಜಾ, ರವಿಚಂದ್ರ ಕೊಂಚಾಡಿ, ಮಹಮ್ಮದ್ ಮುಸ್ತಫಾ, ಸಂತೋಷ್ ಆರ್.ಎಸ್,ನಾಗೇಶ್ ಕೋಟ್ಯಾನ್, ಡಿವೈಎಫ್ ಐ ನಾಯಕರಾದ ನವೀನ್ ಕೊಂಚಾಡಿ, ದಯಾನಂದ ಶೆಟ್ಟಿ, ಮನೋಜ್ ವಾಮಂಜೂರು, ನೌಷಾದ್ ಬೆಂಗರೆ, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ತಿಮ್ಮಯ್ಯ ಕೊಂಚಾಡಿ, ಕೃಷ್ಣ ತಣ್ಣೀರುಬಾವಿ, ಜನವಾದಿ ಮಹಿಳಾ ಸಂಘಟನೆಯ ನಾಯಕರಾದ ಭಾರತಿ ಬೋಳಾರ,ಪ್ರಮೀಳಾ ಶಕ್ತಿನಗರ,ಖ್ಯಾತ ಕಲಾವಿದರಾದ ಕೀತು ಫುರ್ಟಾಡೋ, ಸಾಮಾಜಿಕ ಚಿಂತಕರಾದ ಪ್ರಮೀಳಾ ದೇವಾಡಿಗ,ಜೆರಾಲ್ಡ್ ಟವರ್,ಉದಯ ಆಚಾರ್ಯ, ಎಸ್ ಎಫ್ ಐ


ನಾಯಕರಾದ ಮಾಧುರಿ ಬೋಳಾರ, ಸಮುದಾಯ ಸಂಘಟನೆಯ ವಾಸುದೇವ ಉಚ್ಚಿಲ್ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು