2:50 PM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಚಿತ್ರರಂಗಕ್ಕೆ ಮತ್ತೆ ಆಘಾತ : ಸ್ಯಾಂಡಲ್ ವುಡ್‌ ಮೊದಲ ತಲೆಮಾರಿನ ಹಾಸ್ಯನಟಿ ಬಿ.ಜಯಾ ನಿಧನ

03/06/2021, 19:44

ಬೆಂಗಳೂರು (Reporter Karnataka News)

ಕನ್ನಡ ಸಿನಿರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನ ಹೊಂದಿದ್ದಾರೆ. ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದಾರೆ.

77 ವರ್ಷ ವಯ್ಯಸ್ಸಿನ ಅವರು
ಸುಮಾರು 6 ದಶಕಗಳಿಗೂ ಅಧಿಕ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟಿಯಾಗಿ ಗುರುತಿಸಿಕೊಂಡಿದ್ದರು. ಮುಖ್ಯವಾಗಿ ಕನ್ನಡ ಚಿತ್ರರಂಗದ ಮೊದಲ ತಲೆಮಾರಿನ ಹಾಸ್ಯನಟಿ ಎಂದು ಜಯಾ ಜನಪ್ರಿಯರಾಗಿದ್ದರು. ಮೂರು ತಲೆಮಾರಿನ ನಟ, ನಟಿಯರೊಂದಿಗೆ ಅಭಿನಯಿಸಿರುವ ಹೆಗ್ಗಳಿಕೆ ಅವರದು. ಹಾಸ್ಯ ದಿಗ್ಗಜರಾದ ನರಸಿಂಹರಾಜು, ದ್ವಾರಕೀಶ್ ಮುಂತಾದವರೊಂದಿಗೆ ಜಯಾ ನಟಿಸಿದ ಹಾಸ್ಯ ದೃಶ್ಯಗಳು ಇಂದಿಗೂ ಜನಪ್ರಿಯ. 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅವರು ರಂಗಭೂಮಿ, ಕಿರುತೆರೆಯಲ್ಲೂ ಅವರು ಬಹಳ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಚಿತ್ರರಂಗ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು