6:05 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಹಳ್ಳ ಹಿಡಿದಿದೆ ವಸೂರು ಶುದ್ಧ ಕುಡಿಯುವ ನೀರಿನ ಘಟಕ: 3 ವರ್ಷ ಕಳೆದರೂ ದುರಸ್ತಿ ಭಾಗ್ಯವಿಲ್ಲ!: ಶಾಸಕರು ಏನು ಮಾಡುತ್ತಿದ್ದಾರೆ?

08/01/2022, 13:52

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಸರಕಾರ ಸಾರ್ವಜನಿಕರಿಗೆ ಗ್ರಾಮೀಣ ಮಟ್ಟದಲ್ಲಿ ಕುಡಿಯಲು ಶುದ್ಧವಾದ ನೀರನ್ನು ಕೊಡಬೇಕೆಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಕೆಲವು ಸಂಸ್ಥೆಯವರಿಗೆ ನೀಡಿದ್ದು, ಅವುಗಳ ನಿರ್ವಹಣೆ ಇಲ್ಲದೆ ಶುದ್ಧ ಕುಡಿಯುವ ನೀರಿನ ಘಟಕದ ಯೋಜನೆ ಹಳ್ಳ ಹಿಡಿಯುತ್ತಿದೆ. ಇಂತಹ ಪ್ರಸಂಗ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಿರಸಾಭಿಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. 

ಮಿರಸಾಭಿಹಳ್ಳಿ ಗ್ರಾಪಂ ವ್ಯಾಪ್ತಿಯ ವಿಶ್ವೇಶ್ವರಪುರ(ವಸೂರು)ಗ್ರಾಮದ ಅಂಗನವಾಡಿ ಮುಂಭಾಗದಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ‘ಶುದ್ದ ನೀರು ಆರೋಗ್ಯಕರ ಜೀವ ಜಲ’ ಎಂಬ ಯೋಜನೆಯಡಿಯಲ್ಲಿ ಕೆ ಆರ್ ಐ ಡಿಎಲ್ ಚಳ್ಳಕೆರೆ ಇವರ ಅನುಷ್ಠಾನದಲ್ಲಿ ನಿರ್ಮಿಸಿರುವ ಶುದ್ದ ನೀರಿನ ಘಟಕ ನಿರ್ಮಿಸಿ ಸುಮಾರು 3 ವರ್ಷಗಳು ಕಳೆದರೂ ದುರಸ್ತಿ ಭಾಗ್ಯ ಕಾಣದೆ ಗ್ರಾಮದ ಜನರು ಜನಪ್ರತಿನಿಧಿ ಹಾಗೂ ಅಧಿಕಾರಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ಗ್ರಾಮೀಣ ಭಾಗದ ಜನತೆಯ ಆರೋಗ್ಯ ಕಾಪಾಡಲು ಪ್ಲೋರೈಡ್ ಅಂಶ ಹೆಚ್ಚಾಗಿರುವ ಗ್ರಾಮಗಳಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದರೂ ಸಹ ಅವುಗಳ ನಿರ್ವಹಣೆ ಮಾಡದೆ ಇರುವುದರಿಂದ  ಗ್ರಾಮಸ್ಥರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. 

ಈ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಿಸಿ 3 ವರ್ಷಗಳು ಕಳೆದಿವೆ. ಉದ್ಘಾಟನೆಗೊಂಡು 3 ತಿಂಗಳು ಮಾತ್ರ ಶುದ್ದ ಕುಡಿಯುವ ನೀರಿನ ಘಟಕ ಜನರಿಗೆ ನೀರುಣಿಸಿದೆ ನಂತರ ಅದು ಕೆಟ್ಟು ಯಂತ್ರಗಳು 

ಧೂಳು ಮುಕ್ಕುದ್ದು ಕೆಲ ಯಂತ್ರದ ಬಿಡಿಭಾಗಗಳು ಕಿತ್ತು ಹೋಗಿವೆ. ವಿದ್ಯುತ್ ವೈರ್ ನೇತಾಡುತ್ತಿವೆ. ಘಟಕದ ಬಾಗಿಲು ದಿನದ 24 ಗಂಟೆಯೂ ತೆರೆದಿರುವುದಿಂದ ಘಟಕದ ಪಕ್ಕದಲ್ಲೇ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಶಾಲೆಯಿದ್ದು, ಮಕ್ಕಳು ಘಟಕದಲ್ಲಿ ನೇತಾಡುವ ವಿದ್ಯುತ್ ವೈರ್ ಮುಟ್ಟಿಕೊಂಡು ವಿದ್ಯುತ್ 

ಅವಗಢ ಸಂಭವಿಸಿದರೆ ಯಾರು ಹೊಣೆ? ಜೀವ ಭಯದಲ್ಲಿ ವಿದ್ಯಾರ್ಥಿಗಳು ಆಟವಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 


ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಮೂರು ವರ್ಷಗಳು ದುರಸ್ತಿಯಾಗದೆ ಇರುವುದರಿಂದ ಪ್ಲೋರೈಡ್ ಯುಕ್ತ ನೀರು ಕುಡಿಯದ ಜನರಿಗೆ ಕಿಡ್ನಿಯಲ್ಲಿ ಕಲ್ಲು, ಕೈ ಕಾಲು, ಮಂಡಿ ನೋವು ಸೇರಿದಂತೆ ವಿವಿಧ ರೋಗಗಳು ಬಂದು ಚಿಕಿತ್ಸೆಗಾಗಿ ಅಲೆದಾಡುವ ಪರಿಸ್ಥಿತಿ ಇದೆ.

ಸಾರ್ವಜನಿಕರಿಂದ ತೆರಿಗೆ ರೂಪದಲ್ಲಿ ಸಂಗ್ರಹಿಸಿದ ಹಣದಲ್ಲಿ ನಿರ್ಮಿಸಿದ ಶುದ್ದ ಕುಡಿಯುವ ನೀರಿನ ಘಟಕ ದುರಸ್ತಿ ಕಾಣದ ಹಳ್ಳ ಹಿಡಿಯುವಂತೆ ಮಾಡಿದೆ.

ಈ ಬಗ್ಗೆ ಗ್ರಾಮ ಪಂಚಾಯಿತಿ ಪಿಡಿಒಗೆ ಕೇಳಿದರೆ ನಮಗೆ ಸಂಬಂಧಿಸಿದ್ದಲ್ಲ. ಕಂಪನಿಯರು

ಮಾಡಬೇಕು ಎಂದು ಒಬ್ಬರ ಮೇಲೆ ಒಬ್ಬರ ಕಡೆ ಬೊಟ್ಟು ತೋರಿಸುತ್ತಾರೆ ಎಂದು ನರಸಿಂಹಮೂರ್ತಿ, ನಾಗರಾಜಪ್ಪ, ಕೆಂಚಣ್ಣ, ರಾಜಣ್ಣ, ಮಂಜುನಾಥ, ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.

ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು  ಶುದ್ದ ಕುಡಿಯುವ ನೀರಿನ ಘಟಕ ದುರಸ್ತಿಪಡಿಸುವರೇ ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು