1:58 AM Wednesday27 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದ ವೀಕೆಂಡ್ ಕರ್ಪ್ಯೂ ಬಿಸಿ; ಬಸ್ ಗಳಿದ್ದರೂ ಪ್ರಯಾಣಿಕರಿಲ್ಲ!!

08/01/2022, 15:03

ಮಂಗಳೂರು(reporterkarnataka.com):

ವೀಕೆಂಡ್ ಕರ್ಫ್ಯೂ ಬಿಸಿ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದೆ. ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.

ಸದ್ಯ ಮಂಗಳೂರಿನಿಂದ 50% ಸರ್ಕಾರಿ ಬಸ್ ಗಳಷ್ಟೇ ಓಡಾಟ ನಡೆಸುತ್ತಿದೆ. ಹೊರ ಜಿಲ್ಲೆ ‌ಮತ್ತು ದ.ಕ. ಜಿಲ್ಲೆಯ ಒಳಗೆ ಬೆರಳೆಣಿಕೆ ಬಸ್ ಗಳ ಸಂಚಾರ ನಡೆಸುತ್ತಿದೆ ಎಂದು ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್ ಕುಮಾರ್ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡುತ್ತಾ ತಿಳಿಸಿದರು.

ಪ್ರತಿದಿನ ಬೆಂಗಳೂರಿಗೆ 18 ಬಸ್ ಸಂಚರಿಸಿತ್ತಿದ್ದು, ಇಂದು 9 ಬಸ್ ಮಾತ್ರ ಸಂಚಾರ ನಡೆಸಿದೆ.

ಎಲ್ಲಾ ಜಿಲ್ಲೆಗಳಿಗೂ ಬಸ್ ಇದ್ದರೂ ಪ್ರಯಾಣಿಕರ ಸಂಖ್ಯೆ ಕಡಿಮೆ ಇದೆ. ಬೆಂಗಳೂರು ಸೇರಿ ಹಲವೆಡೆ ಬುಕ್ಕಿಂಗ್ ಆಗಿದ್ದ ಟಿಕೆಟ್ ಕ್ಯಾನ್ಸಲ್ ಆಗಿವೆ.

ತಮಿಳುನಾಡಿಗೂ ನಾವು ಬಸ್ ಸಂಚಾರ ಬಂದ್ ಮಾಡಿದ್ದೇವೆ. ಕೇರಳದ ಕಾಸರಗೋಡಿಗೆ 50% ಬಸ್ ಓಡಿದ್ರೂ ಪ್ರಯಾಣಿಕರು ಇಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು