12:40 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮೇಕೆದಾಟು ಯೋಜನೆಗೆ ಕಾಂಗ್ರೆಸ್‌ ನದ್ದು ಪಾದಯಾತ್ರೆಯಲ್ಲ, ಸುಳ್ಳಿನ ಜಾತ್ರೆ: ಬಿಜೆಪಿ ಟ್ವಿಟ್

08/01/2022, 22:31

ಬೆಂಗಳೂರು(reporterkarnataka.com): ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್‌ ನ ನಡೆಸಲುದ್ದೇಶಿಸಿದ ಪಾದಯಾತ್ರೆ ಭಾರೀ ಸದ್ದು ಮಾಡುತ್ತಿದ್ದು, ಆಡಳಿತ ಪಕ್ಷ ಬಿಜೆಪಿ ಕಟುವಾಗಿ ಟೀಕಿಸಿದೆ. ರಾಜ್ಯ ಬಿಜೆಪಿ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿದೆ.

ಅಂತರ್ ರಾಜ್ಯ ಜಲ ವಿವಾದ ಸಂದರ್ಭದಲ್ಲಿ ವಿವೇಕಯುತ ಹೋರಾಟ ಅಗತ್ಯವಿದೆ ಎಂದು ಇತಿಹಾಸ ಕಲಿತಿಲ್ಲವೇ..? ಈ‌ ಹಿಂದೆ ಕಾವೇರಿ ಪಾದಯಾತ್ರೆ ನಡೆಸಿ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡ ಘಟನೆ ನೆನಪಿರಬೇಕಲ್ಲವೇ..? ರಾಜಕೀಯಕ್ಕಾಗಿ ರಾಜ್ಯದ ಮರ್ಯಾದೆಯನ್ನೇಕೆ ಹರಾಜು ಹಾಕುತ್ತಿದ್ದೀರಿ..? ಎಂದು ಬಿಜೆಪಿ ಪ್ರಶ್ನಿಸಿದೆ.

ಸಂಘರ್ಷದಿಂದ ವ್ಯಾಜ್ಯ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ಸಿಗರು #ಸುಳ್ಳಿನಜಾತ್ರೆ ಮಾಡುವ ಬದಲು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ತಮ್ಮ ಮಿತ್ರಪಕ್ಷ ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. ಹಸಿರುಪೀಠದಲ್ಲಿ ಹೂಡಿದ ದಾವೆ ವಾಪಾಸ್ ತೆಗೆಸಲಿ ಎಂದು ಆಗ್ರಹಿಸಿದೆ.

2014 ರಿಂದ 2018 ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೇಕೆದಾಟು ವಿಚಾರದಲ್ಲಿ ಎಸಗಿದ ಐತಿಹಾಸಿಕ ಪ್ರಮಾದದಿಂದ ಈಗ ಕಾವೇರಿ ಕಣ್ಣೀರು ಸುರಿಸುವಂತಾಗಿದೆ. ಕೇಂದ್ರದಿಂದ ಒಪ್ಪಿಗೆ ಹಾಗೂ ಅನುದಾನ ಪಡೆಯುವಾಗ ನಿದ್ದೆಗೆ ಜಾರಿ ಈಗ ಪಾದಯಾತ್ರೆಯ ನಾಟಕವಾಡುವುದಕ್ಕೆ ನಾಚಿಕೆಯಾಗುವುದಿಲ್ಲವೆ? ಎನ್ನುವ ಮೂಲಕ ಬಿಜೆಪಿ ಆರೋಪಿಸಿದೆ.

ಮೇಕೆದಾಟು ಯೋಜನೆಗೆ ನಾಳೆಯೇ ಭೂಮಿಪೂಜೆ ನಡೆಸಿ ಎಂದು ಅಬ್ಬರಿಸುತ್ತಿರುವ ಕಾಂಗ್ರೆಸ್ ನಾಯಕರೇ ನಮ್ಮ ಪ್ರಶ್ನೆಗೆ ಉತ್ತರಿಸಿ. ಮೇಕೆದಾಟು ಯೋಜನೆ ಸಂಬಂಧ ಅನಗತ್ಯ ಕಾಲಹರಣ ಮಾಡಿದ್ದು ಯಾರು? ಅಧಿಕಾರದಲ್ಲಿದ್ದಾಗ ಕಡತಯಜ್ಞ ಮಾಡದೆ, ವಿರೋಧ ಪಕ್ಷವಾದಾಗ ಆಂದೋಲನ ನಡೆಸುವುದು ಎಷ್ಟು ಸರಿ..? ಎಂದಿದೆ.

ಅಂತಾರಾಜ್ಯ ಜಲ ವಿವಾದ ಒಂದು ಸೂಕ್ಷ್ಮ ವಿಚಾರ. ಕರ್ನಾಟಕ ಸರ್ಕಾರ ಈ ಸಂಬಂಧ ಎಚ್ಚರಿಕೆ ಹಾಗೂ ವಿವೇಕದ ಹೆಜ್ಜೆ ಇಡುತ್ತಲೇ ಬಂದಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು