12:22 PM Friday29 - November 2024
ಬ್ರೇಕಿಂಗ್ ನ್ಯೂಸ್
ಹೆಚ್ಚುತ್ತಿರುವ ಗರ್ಭಿಣಿಯರ, ಬಾಣಂತಿಯರ ಸಾವು ಪ್ರಕರಣ: ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಸರಕಾರದಿಂದ ಸರ್ಜರಿ!! ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು: ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ… ಲಂಡನ್ ವಾಲ್ವ್ಸ್ 2024 ರಲ್ಲಿ ಮಿಂಚಿದ ಭಾರತ: ಹೃದಯ ಕವಾಟ ಆವಿಷ್ಕಾರ ‘ಮೈವಾಲ್… ಹುಣಸಗಿ: ವಿದ್ಯಾರ್ಥಿಗಳಿಂದ ಕೆಎಸ್ಸಾರ್ಟಿಸಿ ಬಸ್ ತಡೆದು ಪ್ರತಿಭಟನೆ; ಸಾರ್ವಜನಿಕರ ಸಾಥ್ ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ…

ಇತ್ತೀಚಿನ ಸುದ್ದಿ

ಸ್ಕಾರ್ಫ್-ಕೇಸರಿ‌ ಶಲ್ಯ ವಿವಾದ‌: ಕಾಲೇಜು ಆವರಣದಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಹೊಡೆದಾಟ

12/01/2022, 09:26

ಚಿಕ್ಕಮಗಳೂರು(reporterkarnataka.com): ಜಿಲ್ಲೆಯ ಕೊಪ್ಪದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ಕಾರ್ಫ್ ಹಾಗೂ ಕೇಸರಿ‌ ಶಲ್ಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ಗಲಾಟೆ ನಡೆದಿದೆ.‌ 

ಕೆಲವರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸ್ಕಾರ್ಫ್ ಹಾಗೂ ಕೇಸರಿ ಶಲ್ಯಕ್ಕೆ ಸಂಬಂಧಿಸಿದಂತೆ ಕೊಪ್ಪದ ಪದವಿ ಕಾಲೇಜಿನಲ್ಲಿ ವಿವಾದ ಆರಂಭಗೊಂಡಿತ್ತು. 

ಅಲ್ಲಿ ಶಾಸಕರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ವಿವಾದ ಅಂತ್ಯ ಕಾಣುತ್ತಿದ್ದಂತೆ ಪಿಯು ಕಾಲೇಜಿನಲ್ಲಿ‌‌ ಆರಂಭಗೊಂಡಿದೆ. ಅದು ಒಂದು ಹಂತಕ್ಕೆ ಮುಂದಕ್ಕೆ ಹೋಗಿದೆ. ಎರಡು ಗುಂಪುಗಳ ವಿದ್ಯಾರ್ಥಿಗಳು ಗಲಾಟೆ ಮಾಡಿಕೊಂಡಿದ್ದಾರೆ. ಕಾಲೇಜಿನ ಆವರಣದಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯೂ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಈ ವಿವಾದದ ಆರಂಭದಲ್ಲಿಯೇ ಇತ್ಯರ್ಥಗೊಳಿಸುವಲ್ಲಿ‌ ಕಾಲೇಜು ಆಡಳಿತ ಮಂಡಳಿ ಮುಂದಾಗಬೇಕಿತ್ತು. ಪ್ರಾಚಾರ್ಯ ಹಾಗೂ ಆಡಳಿತ ಮಂಡಳಿ ಬೇಜಾವ್ದಾರಿಯಿಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು