12:39 AM Sunday5 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕೊರೊನಾ ಹೆಚ್ಚಳ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್; ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರ

14/01/2022, 15:10

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ 9ನೇ ತರಗತಿಗೆ ಭೌತಿಕ ತರಗತಿ ಬಂದ್ ಮಾಡಲಾಗಿದೆ.

ಮೈಸೂರು ನಗರ ಮತ್ತು ಮೈಸೂರು ತಾಲೂಕಿನಲ್ಲಿ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ.

ಜ.13 ರಿಂದ ಧಾರವಾಡ ನಗರ ಹಾಗೂ ಗ್ರಾಮೀಣ ಮತ್ತು ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ 1ರಿಂದ 8 ರ ವರೆಗಿನ ಭೌತಿಕ ತರಗತಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆ, ಬಿಬಿಎಂಪಿ ವ್ಯಾಪ್ತಿಯಲ್ಲಿ 1ರಿಂದ 9 ನೇ ತರಗತಿಗಳನ್ನು ಜನವರಿ 31 ರವರೆಗೆ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಜಿಲ್ಲಾಧಿಕಾರಿಗಳು ಆಯಾ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು