3:45 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು: ಸ್ವಾಮಿ ವಿವೇಕಾನಂದರ 159ನೇ ಜನ್ಮದಿನಾಚರಣೆ, ರಾಷ್ಟ್ರೀಯ ಯುವ ಸಪ್ತಾಹ

14/01/2022, 17:27

ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಹಾಗೂ ಮಂಗಳೂರಿನ ನೆಹರೂ ಯುವ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವು ಮಂಗಳಾ ಕ್ರೀಡಾಂಗಣದಲ್ಲಿ  ಗುರುವಾರ ಜರುಗಿತು.

ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಮ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಸಂಧ್ಯಾ ಎಂ.ಆಚಾರ್ ಉದ್ಘಾಟಿಸಿದರು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು,ವಿವೇಕಾನಂದರ ಹಾದಿಯಲ್ಲಿ ನಡೆಯಿರಿ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ಮಹೇಶ್ ಕನ್ನೇಶ್ವರ ಮಾತನಾಡಿ, ಸ್ವಾಮಿ ವಿವೇಕಾನಂದರು ನಮ್ಮ  ದೇಶವನ್ನು ತಮ್ಮದೇ ಆದ ರೀತಿ ಯಲ್ಲಿ ಅಮೇರಿಕಾದಲ್ಲಿ ಎತ್ತಿ ಸಾರಿದವರು. ಅವರು ತಮ್ಮ ಜೀವನವನ್ನು ಮಾತನಾಡಿದಂತೆ ರೂಪಿಸಿ ಕೊಂಡವರು. ಯುವ ಪೀಳಿಗೆಗೆ ನೀಡಿದ  ಕೊಡುಗೆಯನ್ನು ಅನ್ವಯಿಸಿಕೊಳ್ಳಿ ಎಂದು ಮಕ್ಕಳಿಗೆ ಕರೆ ನೀಡಿದರು. ಎಲ್ಲಾ ವಿಭಾಗಗಳಲ್ಲಿಯೂ ಯುವಕರನ್ನು ಬಡಿದೇಬ್ಬಿಸಿದ ಏಕೈಕ ನಾಯಕ. ಜಾತಿ ಧರ್ಮವನ್ನು ಬಿಟ್ಟು ಅವರ ತತ್ವದರ್ಶಗಳನ್ನು ನಾವು ಮೈಗೂಡಿಸಿಕೊಳ್ಳೋಣ ಎಂದರು.



ಮುಖ್ಯ ಅತಿಥಿಯಾಗಿ  ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಎಳೆಯ ಪ್ರಾಯದಲ್ಲೇ ಸ್ವಾಮಿ ವಿವೇಕಾನಂದರ ತತ್ವ- ಆದರ್ಶಗಳನ್ನು ಮೈಗೂಡಿಸಿಕೊಂಡರೆ ದೇಶದ ಯುವ ಸಮುದಾಯ ಸದೃಡ ಭವ್ಯ ಭಾರತದ  ನಿರ್ಮಾಣಕ್ಕೆ ಮೈಲುಗಲ್ಲು ಎಂದು ಕರೆ ನೀಡಿದರು.

ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಇತ್ತೀಚೆಗೆ ಮಂಡ್ಯದಲ್ಲಿ ನಡೆದ 2021-22ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪದಕ ವಿಜೇತರಾದ ಜಿಲ್ಲೆಯ ಅಭಿಷೇಕ್ ಎಂ.ಬಿ. ಹಾಗೂ  ಪೃಥ್ವಿ.ಎಂ.ಆರ್ ಅವರನ್ನು ಸನ್ಮಾನಿಸಲಾಯಿತು. 


ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಥ್ಲೆಟಿಕ್ಸ್ ಹಿರಿಯ ತರಬೇತುದಾರ ಡಾ. ವಸಂತ ಕುಮಾರ ನಿರೂಪಿಸಿದರು. ಶಂಕರ್ ಸುವರ್ಣ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು