1:19 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಕಡೆಕಾರು ನದಿ ತೀರದ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್  ಮಾಹಿತಿ

14/01/2022, 21:07

ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದಕ್ಷಿಣ ಮಹಾ ಶಕ್ತಿ ಕೇಂದ್ರ ದ ಜಪ್ಪಿನಮೊಗರು 54ನೇ ವಾರ್ಡಿನ ಕಡೆಕಾರು ನದಿ ತೀರದಲ್ಲಿ ವಾಸಿಸುತ್ತಿರುವ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. 

ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಧನಲಕ್ಷ್ಮಿ ಗಟ್ಟಿ ಅವರು ಪ್ರಸ್ತುತ ಕಾಲದಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ತಿಳಿ ಹೇಳಿದರು. ಮಕ್ಕಳು ಇದರ ಬಗ್ಗೆ ಎಚ್ಚೆತ್ತುಕೊಂಡು ಹೇಗೆ ತಮ್ಮನ್ನು ರೂಪಿಸಿಕೊಳ್ಳಬೇಕೆಂದು ಮಾಹಿತಿಯನ್ನು ಕೊಟ್ಟರು.

ಮಹಿಳಾ ಮೋರ್ಚಾ ಅಧ್ಯಕ್ಷರಾದ ಪೂರ್ಣಿಮಾ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿ ರೂಪಾ.ಡಿ. ಬಂಗೇರ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪೂರ್ಣಿಮಾ ಎಂ., ಸ್ಥಳೀಯ ಪಾಲಿಕೆ ಸದಸ್ಯೆಯಾದ ವೀಣಾ ಮಂಗಳಾ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಹರಿಣಿ ಪ್ರೇಮ್, ನರ್ಮದಾ ರೈ ಮತ್ತು ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು