10:55 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್

14/01/2022, 21:23

ಬೆಂಗಳೂರು(reporterkarnataka.com): ಕೋವಿಡ್ ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.

ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುತ್ತೇವೆ ವಿನಹ ಲಾಕ್ ಡೌನ್ ಖಂಡಿತ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.

ಈಗಾಗಲೇ ಎರಡು ಬಾರಿ ಲಾಕ್ಡೌನ್ ನಿಂದ ಸಾಕಷ್ಟು ಆರ್ಥಿಕ ಸಮಸ್ಯೆ ಜನರಿಗೆ ಉಂಟಾಗಿರುವ ಅರಿವು ಸರಕಾರಕ್ಕೆ ಇದೆ.

ಹೀಗಾಗಿ ಲಾಕ್ಡೌನ್ ಉದ್ದೇಶ ಸರಕಾರದ ಮುಂದಿಲ್ಲ.ಫೆಬ್ರವರಿ ಅಂತ್ಯದ ವೇಳೆಗೆ ಕೋವಿಡ್ ಸಂಖ್ಯೆ ಇಳಿಮುಖ ಆಗುತ್ತದೆ ಎಂದು ತಜ್ಞರು ಹೇಳಿದ್ದಾರೆ.

ಹೀಗಾಗಿ ಜನರು ಒಂದೂವರೆ ತಿಂಗಳ ಕಾಲ ಅತ್ಯಂತ ಎಚ್ಚರಿಕೆಯಲ್ಲಿ ಇರಬೇಕೆಂದು ಸಚಿವರು ಮನವಿ ಮಾಡಿದರು.

ಫೆಬ್ರವರಿ ಮೊದಲ ವಾರದಲ್ಲಿ ಅತ್ಯಧಿಕ  ಕೋವಿಡ್ ಸಂಖ್ಯೆಗಳ ನಿರೀಕ್ಷೆ ಇದೆ. ಮೂರು ಮತ್ತು ನಾಲ್ಕನೇ ವಾರದಲ್ಲಿ ಇದು ಕಡಿಮೆಯಾಗುತ್ತಾ ಹೋಗುತ್ತದೆ.

ತಜ್ಞರು ಅಭಿಪ್ರಾಯ ನೀಡಿದ್ದಾರೆ. ಹೀಗಾಗಿ ಸರಕಾರ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತದೆ.

ಆತಂಕಕಾರಿ ಮತ್ತು ಜನರಿಗೆ ಸಮಸ್ಯೆ ಉಂಟು ಮಾಡುವ ನಿಯಮ ಜಾರಿ ಮಾಡುವುದಿಲ್ಲ ಎಂದು ಆರೋಗ್ಯ ಸಚಿವರು ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು