10:14 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಆರೋಪಿಯ ಬಂಧಿಸಲು ಬಾಡಿಗೆ ಕಾರು ಕೇಳಿದ ಪಿಎಸ್ಐಗೆ ಶಾಕ್ ನೀಡಿದ ಎಸ್ ಪಿ: ಠಾಣೆ ಮುಂದೆ ಕಾರು ಬರ್ತಿದ್ದಂತೆ ಸಿಬ್ಬಂದಿಗಳು ಗಢಗಢ

15/01/2022, 11:51

ತುರುವೇಕೆರೆ(reporterkarnataka.com): ಮೂರ್ನಾಲ್ಕು ತಿಂಗಳ ಹಿಂದೆಯೇ ದೂರು ದಾಖಲಾಗಿದ್ದರೂ ಆ ಪೊಲೀಸ್​ ಠಾಣೆ ಪಿಎಸ್​ಐ ಮಾತ್ರ ಆರೋಪಿಯನ್ನ ಬಂಧಿಸಿರಲಿಲ್ಲ. ದೂರುದಾರರು ನಿತ್ಯ ಠಾಣೆಗೆ ಅಲೆದು ಅಲೆದು ಸಾಕಾಗಿತ್ತು. ಸರ್​ ಆರೋಪಿ ಅಲ್ಲೇ ಇದ್ದಾನೆ ಬನ್ನಿ ಅರೆಸ್ಟ್​ ಮಾಡಿ ಅಂದ್ರೆ ‘ಆರೋಪಿಯನ್ನು ಕರೆತರಲು ಬಾಡಿಗೆ ಕಾರು ತನ್ನಿ’ ಎಂದು ಸೂಚಿಸಿದ್ದ ದಂಡಿನಶಿವರ ಠಾಣೆ ಪಿಎಸ್​ಐ ಶಿವಲಿಂಗಯ್ಯಗೆ ತುಮಕೂರು ಜಿಲ್ಲಾ ಪೊಲೀಸ್​ ಅಧೀಕ್ಷಕ ರಾಹುಲ್​ಕುಮಾರ್​ ನೀಡಿರುವ ಶಾಕ್​ ವ್ಯಾಪಕ ಚರ್ಚೆಗೆ ಒಳಗಾಗಿದೆ.

ಎಸ್ಪಿಯ ಖಡಕ್​ ನಿರ್ಧಾರಕ್ಕೆ ಪಿಎಸ್​ಐ ಬೆಸ್ತು ಬಿದ್ದಿದ್ದಾರೆ.ಏನಿದು ಘಟನೆ? 2021ರ ಆಗಸ್ಟ್​ 28ರಂದು ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದಂಡಿನಶಿವರ ಠಾಣಾ ವ್ಯಾಪ್ತಿಯ ಕೋಡಿಹಳ್ಳಿಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಾಗೇಂದ್ರಪ್ಪ ಹಾಗೂ ಪಕ್ಕದ ಮನೆಯ ಶಿವಪ್ರಕಾಶ್​ ಮತ್ತು ಪ್ರಕಾಶ್​ರ ಮಗ ಚಂದನ್​ ನಡುವೆ ಜಗಳವಾಗಿತ್ತು. ಆ ವೇಳೆ ನಾಗೇಂದ್ರಪ್ಪ ಹಾಗೂ ಪತ್ನಿ ಶಿವಮ್ಮಗೆ ಚಂದನ ಮತ್ತು ಶಿವಪ್ರಕಾಶ್ ಹಿಗ್ಗಾಮುಗ್ಗಾ ಹಲ್ಲೆಗೈದಿದ್ದರಂತೆ. ನಾಗೇಂದ್ರಪ್ಪ ಮತ್ತು ಶಿವಮ್ಮಗೆ ಗಂಭೀರ ಗಾಯಗಳಾಗಿ ತುರುವೇಕೆರೆ ಆಸ್ಪತ್ರೆ ಹಾಗೂ ತುಮಕೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ವೈದ್ಯರು ಇದು ಮಾರಣಾಂತಿಕ ಹಲ್ಲೆ ಅಂತಾ ವರದಿ ನೀಡಿದ್ದಾರೆ. ಇದನ್ನ ಪಡೆದ ನಾಗೇಂದ್ರಪ್ಪ ದಂಡಿನಶಿವರ ಪೊಲೀಸ್ ಠಾಣೆಗೆ 307 ಕೊಲೆ ಪ್ರಯತ್ನ ಕೇಸ್ ನೀಡಿದ್ದರು.

ಆರೋಪಿಗಳನ್ನು ಬಂಧಿಸದೆ ಪಿಎಸ್​ಐ ನಿರ್ಲಕ್ಷ್ಯ ವಹಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಪ್ರಕಾಶ್​ಗೆ ಜಾಮೀನು ದೊರೆತಿದ್ದು, ಚಂದನ್​ ತಲೆಮರೆಸಿಕೊಂಡಿದ್ದ. ಹೀಗಾಗಿ ಆರೋಪಿ ಚಂದನ್​ನನ್ನು ಬಂಧಿಸುವಂತೆ ದೂರುದಾರ ನಾಗೇಂದ್ರಪ್ಪ ಠಾಣೆಗೆ ಬಂದು ಪಿಎಸ್​ಐ ಬಳಿ ಮನವಿ ಮಾಡಿಕೊಂಡಾಗ, ಆರೋಪಿಯನ್ನು ಬಂಧಿಸೋಣ…. ಅದಕ್ಕಾಗಿ ನೀನೊಂದು ಬಾಡಿಗೆ ವಾಹನ ಮಾಡಿಕೊಂಡು ಬಾ ಎಂದು ಪಿಎಸ್​ಐ ಶಿವಲಿಂಗಯ್ಯ ಹೇಳಿದ್ದರು ಎನ್ನಲಾಗಿದೆ.

ಪಿಎಸ್​ಐ ಶಿವಲಿಂಗಯ್ಯ,ತನಿಖೆಗೆ ಆಗ್ರಹಿಸಿ ಪದೇಪದೆ ಠಾಣೆಗೆ ಭೇಟಿ ನೀಡುತ್ತಿದ್ದ ನಾಗೇಂದ್ರಪ್ಪ ಪಿಎಸ್​ಐ ವರ್ತನೆಗೆ ರೋಸಿಹೋಗಿ ಗುರುವಾರ ತುಮಕೂರಿಗೆ ಬಂದು ಜಿಲ್ಲಾ ಪೊಲೀಸ್​ ಅಧೀಕ್ಷಕ ರಾಹುಲ್​ಕುಮಾರ್​ ಅವರನ್ನು ಭೇಟಿಯಾಗಿ ಕಣ್ಣೀರಿಟ್ಟಿದ್ದರು. ಪಿಎಸ್​ಐ ವರ್ತನೆಗೆ ಕೆಂಡಾಮಂಡಲರಾದ ಎಸ್​ಪಿ, ಸ್ವತಃ ತಮ್ಮ ಕಾರಿನಲ್ಲೇ ನಾಗೇಂದ್ರಪ್ಪ ಮತ್ತು ಅವರ ಕಡೆಯವರನ್ನ ಕುಳಿತುಕೊಳ್ಳುವಂತೆ ಹೇಳಿ, ತಮ್ಮ ಕಾರು ಚಾಲಕನಿಗೆ ಕರೆದು ಇವರನ್ನು ಸೀದಾ ದಂಡಿನಶಿವರ ಪೊಲೀಸ್ ಠಾಣೆಗೆ ಬಿಟ್ಟು ಬಾ ಎಂದಿದ್ದಾರೆ. ಕಾರು ಬಂದಿದೆ ಆರೋಪಿಯನ್ನು ಬಂಧಿಸುವಂತೆ ಪಿಎಸ್​ಐ ಅವರನ್ನ ಕೇಳಿ ಎಂದು ನಾಗೇಂದ್ರಪ್ಪಗೆ ಹೇಳಿ ಕಳುಹಿಸಿದ್ದಾರೆ.

ಪೊಲೀಸ್​ ಠಾಣೆ ಮುಂದೆ ಸಾಹೇಬರ ಕಾರು ಕಂಡೊಡನೆ ದಂಗಾದ ದಂಡಿನಶಿವರ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ನಿಂತಲ್ಲಿಯೇ ಬೆವತು ಹೋಗಿದ್ದಾರೆ. ಅಷ್ಟೇ ಅಲ್ಲ, ದಂಡಿನಶಿವರ ಪಿಎಸ್​ಐ ಶಿವಲಿಂಗಯ್ಯಗೆ ದೂರವಾಣಿ ಕರೆ ಮಾಡಿದ ಎಸ್​ಪಿ ರಾಹುಲ್, ಆರೋಪಿ ಎಲ್ಲೇ ಇದ್ದರೂ ನಾಳೆ ಬೆಳಗಾಗುವಷ್ಟರಲ್ಲಿ ಬಂಧಿಸಬೇಕು ಎಂದು ಖಡಕ್​ ವಾರ್ನಿಂಗ್​ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು