7:04 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ

15/01/2022, 19:44

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬದಲಾವಣೆ ಇಲ್ಲ. ಬೊಮ್ಮಾಯಿ ನೇತೃತ್ವದಲ್ಲೇ ಮುಂಬರುವ ಚುನಾವಣೆ ಎದುರಿಸಲಾಗುವುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಹೊಸ ಮುಖಗಳಿಗೆ ಆದ್ಯತೆ ಕೊಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಶಾಸಕ ಮತ್ತು ಸಚಿವರಿಂದ ಒತ್ತಡವಿದೆ ಎಂದು ಅಥಣಿಯಲ್ಲಿ ಆರೆಸ್ಸೆಸ್ ಪ್ರಮುಖರ ಭೇಟಿಯಾದ ಜಾರಕಿಹೊಳಿ ನುಡಿದರು.

ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಹೊಸಬರಿಗೆ ಅವಕಾಶ ಮತ್ತು ಕುಮಠಳ್ಳಿ ಅಥವಾ ತಮಗೆ ಸಚಿವ ಸ್ಥಾನದ ವಿಚಾರದಲ್ಲಿ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ.

ಮಹೇಶ್ ಕುಮಠಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಪಾರ್ಟಿಯಲ್ಲಿ ಚರ್ಚೆಯಾಗಿದೆ.

ಪಕ್ಷದ ವರಿಷ್ಟರಾದ ಅರುಣ ಸಿಂಗ್ ,ಅಮೀತ ಷಾ, ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುವದಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು