6:25 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು…

ಇತ್ತೀಚಿನ ಸುದ್ದಿ

ಕಾನೂನು ಅರಿಯದೆ ಇರುವುದೇ ಅಪರಾಧ: ಎನ್ನೆಸ್ಸೆಸ್ ಯುವ ಸಪ್ತಾಹದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ವರ್ಣೇಕರ್

17/01/2022, 22:22

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ,  ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಯುವ ಜನತೆಯಲ್ಲಿ ಕಾನೂನಿನ ಅರಿವು ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಪೃಥ್ವೀರಾಜ್ ವರ್ಣೇಕರ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾನೂನು ಅನ್ನೋದು ಸಾಮಾನ್ಯ ಜ್ಞಾನ. ಅದನ್ನು ಅರಿಯದೇ ಇರುವುದೇ ಅಪರಾಧ. ಸಂವಿಧಾನವನ್ನು ಓದುವುದೇ ಧರ್ಮ ಎಂದು ಹೇಳಿದರು. 

ಬೇರೆ ಜಿಲ್ಲೆಗೆ ಹೋಲಿಸಿದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಯುವ ಪೀಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುದರಲ್ಲಿ ಹಿಂದೆ ಉಳಿದಿದ್ದಾರೆ.ಎಂದು ಅವರು ಖೇದ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಆಯೋಜಕರಾದ ಮಂಗಳೂರು ವಿಶ್ವವಿದ್ಯಾನಿಲಯದ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ದ.ಕ. ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಯುವ ಸಪ್ತಾಹವನ್ನು ನಡೆಸುತ್ತಿದೆ .ಯುವ ಸಮುದಾಯ ವಿವೇಕಾನಂದರ ತತ್ವ ಆದರ್ಶಗಳ್ಳನ್ನು ಮೈಗೂಡಿಸಿಕೊಳ್ಳಿ ಎಂದು ಹೇಳಿದರು.

ಅಧ್ಯಕ್ಷತೆಯನ್ನು ವಿವಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಡಾ. ಹರೀಶ್ ವಹಿಸಿದ್ದರು.

ಯೋಜನಾಧಿಕಾರಿಗಳಾದ ಡಾ. ಸುರೇಶ್, ಡಾ. ಗಾಯತ್ರಿ ಉಪಸ್ಥಿತರಿದ್ದರು.

ವಿವಿ ಕಾಲೇಜಿನ ರಾ.ಸೇ.ಯೋ ಸ್ವಯಂ ಸೇವಕರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು