1:52 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಶಿವಪುರ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ; ಡೆತ್ ನೋಟ್ ನಲ್ಲಿ ಆತ ಬರೆದದ್ದೇನು?  

18/01/2022, 10:13

ಹೆಬ್ರಿ(reporterkarnataka.com) : ಶಿವಪುರ ಕೆರೆಬೆಟ್ಟು ಎಂಬಲ್ಲಿನ ಖಾಸಗಿ ಶಾಲೆಯ  ಎಂಟನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೆರೆಬೆಟ್ಟು ನಿವಾಸಿ ಸತೀಶ ಶೆಟ್ಟಿ – ಮಮತಾ ಶೆಟ್ಟಿ ದಂಪತಿಯ ಪುತ್ರ ಹೆಬ್ರಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯ ಎಂಟನೆ ತರಗತಿಯ  ಅನ್ವಿತ್ ಶೆಟ್ಟಿ( 14)  ತನ್ನ ಮನೆಯ ಬಾತ್ ರೂಮಿನಲ್ಲಿರುವ ಕಬ್ಬಿಣದ ರಾಡ್ ಗೆ ಚೂಡಿದಾರದ ವೇಲ್ ಅನ್ನು ಕಟ್ಟಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಬಾತ್ ರೂಮಿಗೆ ಹೋಗಿ ಕೆಲ ಸಮಯ ಆದರೂ ಅಣ್ಣ ಬರಲಿಲ್ಲ ಅಂತ ತಮ್ಮ ಬಾಗಿಲು ಬಡಿದರೂ ಬಾಗಿಲು ತೆಗೆಯದಿದ್ದಾಗ  ಐದನೇ ತರಗತಿ ಓದುತ್ತಿರುವ ಸಹೋದರ ಬಾತ್ ರೂಮಿನ ಕಿಂಡಿಯಲ್ಲಿ ಇಣುಕಿ ನೋಡಿದಾಗ ಅಣ್ಣ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿತ್ತು. ಕೂಡಲೇ ಪೋಷಕರು ಹೆಬ್ರಿಯ ಖಾಸಗಿ ಆಸ್ಪತ್ರೆಗೆ ಕರೆತಂದರು ವೈದ್ಯರು ಪರೀಕ್ಷೆ ನಡೆಸಿ ಮೃತಪಟ್ಟಿರುವುದು ದೃಡಪಡಿಸಿದ್ದಾರೆ.

 ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂಬಂಧಿಕರ ಅಕ್ರಂದನ ಮುಗಿಲು ಮುಟ್ಟಿದೆ.

ಡೆತ್ ನೋಟ್ ಬರೆದು ಸಾವಿಗೆ ಶರಣಾದ ವಿದ್ಯಾರ್ಥಿ. ಡೆತ್ ನೋಟ್ ನಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಬಂದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ ನೋಟ್ ನಲ್ಲಿ ಬರೆದಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು