1:33 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

3ನೇ ಅಲೆ ಭೀತಿ: ಮಸ್ಕಿ ತಾಲೂಕಾಡಳಿತದಿಂದ 35 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಸಿದ್ಧ

18/01/2022, 18:07

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನಲ್ಲಿ ಕೋವಿಡ್ 3ನೇ ಅಲೆ ಅಬ್ಬರಿಸುತ್ತಿದ್ದು, ತಾಲೂಕಿನ ಹಲವಡೆ ಸೋಂಕು ಕಾಣಿಸಿಕೊಂಡಿದೆ. ಬಡ ಮಕ್ಕಳು, ಕೂಲಿ ಕಾರ್ಮಿಕರು, ಬೀದಿ ವ್ಯಾಪಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. 

ತಾಲೂಕಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದಂತೆ ತಾಲೂಕು ದಂಡಾಧಿಕಾರಿ ಕವಿತಾ ಆರ್. ಅವರು ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಕಂದಾಯ ಇಲಾಖೆಯ ಸಭೆ ನಡೆಸಿ ತಡೆಗಟ್ಟುವ ಕುರಿತು ಚರ್ಚೆ ನಡೆಸಿದ್ದಾರೆ. ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಸಿದ್ಧವಾಗಿದೆ. ಮೂರನೆಯ ಅಲೆ ಹೆಚ್ಚಾಗುತ್ತಿದ್ದಂತೆ ಮುಂಜಾಗೃತ ಕ್ರಮವಾಗಿ ಮುದುಗಲ್ ಕ್ರಾಸ್ ಮುರಾರ್ಜಿ ಶಾಲೆಯಲ್ಲಿ35 ಹಾಸಿಗೆಯ ಕೋವಿಡ್ ಕೇರ್ ಸಿದ್ಧವಾಗಿದೆ.ಎಂದು ಅವರು ತಿಳಿಸಿದರು.

3 ಅಲೆಗೆ ಮಕ್ಕಳೇ ಟಾರ್ಗೆಟ್. ತಾಲೂಕಿನ ಇದುವರೆಗೆ ಮಕ್ಕಳಲ್ಲೇ ಕೋವಿಡ್ ಸೋಂಕು ಕಂಡುಬಂದಿದ್ದು, ತಾಲೂಕಿನಲ್ಲಿ ಪೋಷಕರ ಚಿಂತೆಯಾಗಿದೆ. 

ಮೂರನೇ ಅಲೆ ತಡೆಗಟ್ಟಲು ತಾಲೂಕಾಡಳಿತದಿಂದ ಹೆಚ್ಚಿನ ಕ್ರಮಕೈಗೊಂಡಿದ್ದು ಈಗಾಗಲೇ ಗ್ರಾಮೀಣ ಭಾಗದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುಂಜಾಗೃತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು