2:58 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಇಬ್ಬರು ಅಂತರ್ ಜಿಲ್ಲಾ ಚೋರರ ಬಂಧನ: 8 ಲಕ್ಷ ರೂ. ಮೌಲ್ಯದ ವಾಹನಗಳ ವಶ

20/01/2022, 10:27

ಮೈಸೂರು(reporterkarnataka.com): ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿರುವ ಪೊಲೀಸರು ಅವರಿಂದ 8 ಲಕ್ಷ ರೂ.ಮೌಲ್ಯದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಪಟ್ಟಣದ ನಿವಾಸಿಗಳಾದ ಅರುಣ(29) ಮತ್ತು ಗುರುಪ್ರಸಾದ್ ಬಂಧಿತ ಆರೋಪಿಗಳು.ವೃತ್ತಿಯಲ್ಲಿ ಆಟೋ ಚಾಲಕರಾದ ಇಬ್ಬರು ಬೇರೆ ಪ್ರಕರಣಗಳಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದರು.

ಆರೋಪಿಗಳು ಮೈಸೂರು ನಗರ, ಮದ್ದೂರು, ಕೊಳ್ಳೇಗಾಲದಲ್ಲಿ ವಾಹನಗಳನ್ನು ಕಳವು ಮಾಡುತ್ತಿದ್ದರು. ಇವರಿಂದ ಕಳವು ಮಾಲು ಖರೀದಿಸಿದ್ದ ಪಟ್ಟಣದ ನಿವಾಸಿಗಳಾದ ನಹೀಮ್ತಾಜ್ ಅಜರ್ ಪಾಷ ಮತ್ತು ಮನು ಅಲಿಯಾಸ್ ಕಳ್ಳಮನು ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಪಟ್ಟಣದ ಪೋಲೀಸ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಮಾತನಾಡಿ, ಆರೋಪಿಗಳಾದ ಅರುಣ ಮತ್ತು ಗುರುಪ್ರಸಾದ್ ಮೈಸೂರು ನಗರ ಸೇರಿದಂತೆ ವಿವಿಧೆಡೆ ವಾಹನಗಳನ್ನು ಕಳ್ಳತನ ಮಾಡುತ್ತಿದ್ದರು. ಬಂಧಿತರಿಂದ ಮೈಸೂರು ನಗರದಿಂದ ಕಳವು ಮಾಡಿದ್ದ 8 ಪ್ಯಾಸೆಂಜರ್ ಆಟೋ ರಿಕ್ಷಾ, ಒಂದು ಆಪೇ ಗೂಡ್ಸ್ ಆಟೋ, 4 ದ್ವಿಚಕ್ರ ವಾಹನಗಳು, ಮದ್ದೂರು ಪಟ್ಟಣದ ಒಂದು ದ್ವಿಚಕ್ರ ವಾಹನ, ಕೊಳ್ಳೇಗಾಲ ಪಟ್ಟಣದ ಒಂದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು