12:13 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಜಕಾಲುವೆ ಉಕ್ಕಿ ಹರಿಯುವುದು ತಡೆಯಲು 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಚಾಲನೆ

20/01/2022, 18:52

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡಿನ ಪತ್ತುಮುಡಿಯಿಂದ ಪ್ರಗತಿ ಸರ್ವಿಸ್ ಸ್ಟೇಷನ್ ವರೆಗಿನ ರಾಜಕಾಲುವೆಯ ಆಯ್ದ ಭಾಗಗಳಲ್ಲಿ 1.5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯ ನೀರು ಉಕ್ಕಿ ಹರಿಯುತ್ತಿರುವ‌ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿಪಡಿಸುವ‌ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದಕ್ಕಾಗಿ ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ 1.5 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದ್ದು ಸಾರ್ವಜನಿಕರ ಸಮಕ್ಷಮದಲ್ಲಿ ಭೂಮಿಪೂಜೆ ನೆರವೇರಿಸಿದ್ದೇವೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಹಾಗೂ ಲೆಕ್ಕಪತ್ರ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಪಾಲಿಕೆ ಸದಸ್ಯರಾದ ಜಯಶ್ರೀ ಕುಡ್ವ,‌ ಸಂಧ್ಯಾ ಮೋಹನ್ ಆಚಾರ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಉತ್ತರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಮೇಶ್ ಹೆಗ್ಡೆ,ಶಕ್ತಿಕೇಂದ್ರದ ಪ್ರಮುಖ ರಾಧಾಕೃಷ್ಣ ಶೆಟ್ಟಿ, ಬೂತ್ ಅಧ್ಯಕ್ಷರಾದ ಜಯರಾಜ್ ಕೊಟ್ಟಾರಿ, ಲೀಡ್ಸ್ ಗ್ರೂಪ್ನ ಕಿಶೋರ್ ಡಿ ಶೆಟ್ಟಿ,ರಾಜೇಶ್ ಡಿ ಶೆಟ್ಟಿ, ಹರೀಂದ್ರ ಶೆಟ್ಟಿ, ಪ್ರಕಾಶ್ ಕೊಡಿಯಾಲ್ ಬೈಲ್, ಮೋಹನ್ ಆಚಾರ್, ನೀಲೇಶ್ ಕಾಮತ್, ವಿಠ್ಠಲ ಶೆಟ್ಟಿ, ಸದಾನಂದ ಶೆಟ್ಟಿ,ಸಂಗೀತ, ಸುಜಾತಾ, ಗೀತಾ, ಅಹಲ್ಯ.ಕೆ, ಸುಕನ್ಯಾ, ಜಯರಾಜ್ ರೈ, ದಾಮೋದರ ಆಚಾರ್ಯ,ವಸಂತ್ ಜೆ ಪೂಜಾರಿ, ಲತಾ, ರತ್ನಾಕರ್, ಅರುಣ್ ಹೆಗ್ಡೆ, ಸುಮಿತ್ ಶೆಟ್ಟಿ, ರೋಹಿತ್ ಶೆಟ್ಟಿ, ಪ್ರಕಾಶ್, ಪ್ರದೀಪ್, ದಿನೇಶ್, ನಟರಾಜ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು