8:54 PM Sunday24 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಬದಿಯಡ್ಕ: ಮೃತಪಟ್ಟಿದ್ದಾರೆಂದು ವೈದ್ಯರು ಬಿಟ್ಟುಕೊಟ್ಟ ವ್ಯಕ್ತಿ ದಾರಿ ಮಧ್ಯದಲ್ಲಿ ಜೀವಂತವಾಗಿ ಉಸಿರಾಡಿದರು!

21/01/2022, 09:13

ಮಂಗಳೂರು(reporterkarnataka.com): ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆಂದು ಬಿಟ್ಟುಕೊಟ್ಟಿದ್ದ ಬದಿಯಡ್ಕದ ವ್ಯಕ್ತಿಯು ಮಾರ್ಗಮಧ್ಯೆ ಜೀವಂತವಾಗಿ ಉಸಿರಾಡಿದ ಘಟನೆ ನಡೆದಿದೆ.

ಗುರುವ(60) ಎಂಬವರನ್ನು ಅಸೌಖ್ಯದ ಹಿನ್ನೆಲೆ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಂಗಳವಾರ ತಪಾಸಣೆ ನಡೆಸಿದ ವೈದ್ಯರು, ರೋಗಿ ಆಕ್ಸಿಜನ್​ ಸಹಾಯದಿಂದ ಮಾತ್ರ ಉಸಿರಾಡುತ್ತಿದ್ದು, ಆಕ್ಸಿಜನ್ ಇಲ್ಲದೇ ಹೋದರೆ ಪ್ರಾಣ ಹೋಗುತ್ತದೆ ಎಂದು ಹೇಳಿದ್ದರು. ಅದರಂತೆ ಆಕ್ಸಿಜನ್​ ತೆರವುಗೊಳಿಸಲಾಗಿತ್ತು. ಬಳಿಕ ರೋಗಿಯ ಸಂಬಂಧಿಕರ ಮನೆಗೆ ಫೋನ್​ ಮಾಡಿ, ಅಂತ್ಯಸಂಸ್ಕಾರಕ್ಕೆ ತಯಾರಿ ಮಾಡುವಂತೆ ಸೂಚಿಸಿದ್ದು, ಅದರಂತೆಯೇ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೂ ಸಿದ್ಧತೆ ನಡೆಸುತ್ತಿದ್ದರು.

ಮಂಗಳೂರು ಆಸ್ಪತ್ರೆಯಿಂದ ಮೃತದೇಹ ಕೊಂಡೊಯ್ಯುತ್ತಿದ್ದ ವೇಳೆ ಉಪ್ಪಳ ತಲುಪುತ್ತಿದ್ದಂತೆಯೇ ಗುರುವ ಅವರ ದೇಹದಲ್ಲಿ ಚಲನೆ ಕಂಡುಬಂದಿದ್ದು, ಉಸಿರಾಡಲು ಆರಂಭಿಸಿದ್ದರು. ತಕ್ಷಣವೇ ರೋಗಿಯನ್ನು ಬದಿಯಡ್ಕದ ಕ್ಲಿನಿಕ್​ಗೆ ಕರೆದೊಯ್ದಿದ್ದು ಗುರುವ ಜೀವಂತವಾಗಿ ಇದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಬಳಿಕ ಅಲ್ಲಿಂದ ಕಾಸರಗೋಡಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು