6:45 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ

22/01/2022, 12:06

ಬೆಂಗಳೂರು(reporterkarnataka.com):

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಫಲಿತಾಂಶದ ಶೇ.50ರಷ್ಟು ಅಂಕ, ಅರ್ಜಿ ಸಲ್ಲಿಸಲು ಅರ್ಹತೆಗಾಗಿ ಪ್ರತಿ ವರ್ಷ ನಡೆಸುವ ಶಿಕ್ಷಕರ ಅರ್ಹತಾ ಪರೀಕ್ಷಾ (TET) ಫಲಿತಾಂಶದ ಶೇ. 20 ರಷ್ಟು ಅಂಕ, ಪದವಿಯ ಶೇ. 20ರಷ್ಟು ಮತ್ತು ಬಿ.ಇಡಿ. ಡಿಎಡ್ ಸೇರಿದಂತೆ ಅರ್ಹ ಶಿಕ್ಷಕರ ಶಿಕ್ಷಣದ ಶೇ. 10 ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ನೇಮಕಗೊಂಡವರಿಗೆ 14,550 ರಿಂದ 26,700 ರೂ.ವರೆಗೆ ಮೂಲ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶಿಕ್ಷಕರಾಗಲು ಇನ್ಮುಂದೆ ಪದವಿಯಲ್ಲಿ ಕಡ್ಡಾಯವಾಗಿ ಸೇ. 50 ಕ್ಕಿಂತ ಹೆಚ್ಚು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಯಾವುದೇ ಭಾಷಾ ವಿಷಯವನ್ನು ಪದವಿಯಲ್ಲಿ ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿರಬೇಕು. ಜೊತೆಗೆ ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಇತಿಹಾಸ,ಭೂಗೋಳ ಶಾಸ್ತ್ರ ಈ ಯಾವುದಾದರೂ ಒಂದು ವಿಷಯವನ್ನು ಮತ್ತೊಂದು ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಬೇಕು ಎಂದು ಕರಡು ನಿಯಮಾವಳಿಯಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು