11:15 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಸ್ಸಿಗೆ ಕಾಯುತ್ತಿದ್ದ ಬಾಲಕಿಯ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ: ಇಬ್ಬರು ಯುವಕರ ಬಂಧನ

22/01/2022, 18:07

ಶಿವಮೊಗ್ಗ(reporterkarnataka.com): ಹೊಸನಗರ ಬಸ್​ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಸಂತೋಷ್  (24) ಹಾಗೂ ಸುನೀಲ್  (26) ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಬಾಲಕಿ ಬಸ್​ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಈ ಇಬ್ಬರು ಯುವಕರು, ನಾವು ನಿನ್ನ ಗ್ರಾಮಕ್ಕೆ ಹೋಗುತ್ತಿದ್ದೇವೆ ಎಂದು ಪುಸಲಾಯಿಸಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿ ವಿಡಿಯೋ ಸಹ ಮಾಡಿದ್ದರು. ಘಟನೆ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಬಾಲಕಿ ಈ ಬಗ್ಗೆ ಪೋಷಕರ ಬಳಿ ಬಾಯ್ಬಿಟ್ಟಿರಲಿಲ್ಲ.

ಇದಾದ ಬಳಿಕ ಯುವಕರು ಮತ್ತೆ ತಮ್ಮ ಜೊತೆ ಬರುವಂತೆ ಬಾಲಕಿಗೆ ಒತ್ತಾಯಿಸಿದ್ದಾರೆ. ಆದರೆ, ಬಾಲಕಿ ಪುನಃ ಕರೆದಾಗ ನಿರಾಕರಿಸಿದ್ದಾಳೆ. ಬಾಲಕಿ ನಿರಾಕರಿಸಿದ್ದಕ್ಕೆ ಯುವಕರು ಅತ್ಯಾಚಾರದ ವಿಡಿಯೋವನ್ನು ಲೀಕ್ ಮಾಡಿದ್ದರು.

ಘಟನೆ ಸಂಬಂಧ ಭಾನುವಾರ ಹೊಸನಗರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದಾರೆ.

ಬಂಧಿತ ಯುವಕರು ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬಂದ ವೇಳೆ ಪರಿಚಯವಾಗಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು