2:24 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ: 5 ಶಾಲೆ ದತ್ತು ಸ್ವೀಕಾರ 

05/06/2021, 19:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ನಾಯಕ್  ಅವರು ಸರಕಾರಿ ಪ್ರಾಥಮಿಕ ಶಾಲೆ ಮಲ್ಲೇದೇವರಗುಡ್ಡ ದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಇರುವುದರಿಂದ ನಾವೆಲ್ಲರೂ ಜೀವಂತವಾಗಿದ್ದೇವೆ. ಪ್ರತಿಯೊಬ್ಬರು ಜನ್ಮದಿನ ಆಚರಣೆ ಮಾಡಿಕೊಳ್ಳುವಾಗ ಒಂದು ಗಿಡವಾದರೂ ನಾಟಿ ಮಾಡಿದರೆ ಜೀವನ ಪಾವನ ಎಂದು ತಿಳಿಸಿದರು. ಇಂದು ಜಗತ್ತಿಗೆ ಹರಡಿರುವ ಭಯಾನಕ ರೋಗ ಕೋವಿಡ್ ಇದನ್ನು ಮುಕ್ತ ಗಳಿಸಬೇಕಾದರೆ ಪ್ರತಿಯೊಬ್ಬರು ಗಿಡ ಗಳನ್ನು ಹಚ್ಚುವದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಚೆನ್ನಾಗಿ ಗಾಳಿ ಬರುವುದರಿಂದ ಆಮ್ಲಜನಕ ಜಾಸ್ತಿಯಾಗುತ್ತದೆ ಎಂದು ಆವರು ನುಡಿದರು. 

ಇದೇ ಸಂದರ್ಭದಲ್ಲಿ ದೇವದುರ್ಗ ತಾಲೂಕಿನಾದ್ಯಂತ ಸುಮಾರು 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲೆದೇವರಗುಡ್ಡ ಶಾಲೆ ಸೇರಿದಂತೆ ಸುಮಾರು ಐದು ಶಾಲೆಯನ್ನು ದತ್ತು ಪಡೆದು ಉನ್ನತಿ ಕರಿಸುವುದಾಗಿ ಶ್ರೀದೇವಿ ನಾಯಕ್ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಲ್ಲೆದೇವರಗುಡ್ಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು, ಊರಿನ ಹಿರಿಯರು ಮತ್ತು ಯುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿ ಬಳಗದವರು ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ರಫಿ, ವಿಶ್ವರಾದ್ಯ ನಾಯಕ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು