ಇತ್ತೀಚಿನ ಸುದ್ದಿ
ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ
24/01/2022, 20:58
ಮಂಗಳೂರು(reporterkarnataka.com); ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇದರ ರಾಷ್ಟ್ರೀಯ ಸೇವಾ ಯೋಜನೆ “ಅಮೃತ ಸಮುದಾಯ ಅಭಿವೃದ್ಧಿ ಯೋಜನೆ” ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮ ಬಂಟ್ವಾಳ ಕೆಂಪುಗುಡ್ಡೆ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಸಂತ ಅಗ್ನೇಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಹಾಗೂ ಸಂಸ್ಕೃತಿ ಚಿಂತಕ ಡಾ. ಅರುಣ್ ಉಳ್ಳಾಲ್ ಮಾತನಾಡಿ “ತುಳುನಾಡ ಸಂಸ್ಕೃತಿ ಮತ್ತು ಯುವಜನತೆಯ” ಕುರಿತಾಗಿ ಶಿಬಿರಾರ್ಥಿಗಳಿಗೆ ಉಪನ್ಯಾಸ ನೀಡಿದರು. ಅದಲ್ಲದೇ ತುಳುನಾಡಿನ ಆರಾಧನೆಗಳ ಬಗ್ಗೆ ಎಲ್ಲರಲ್ಲೂ ವಿಶೇಷ ಆಸಕ್ತಿಯನ್ನು ಹುಟ್ಟಿಸಿದರು ಜೊತೆಗೆ ಜ್ಞಾನವನ್ನು ಹೆಚ್ಚಿಸಿದರು. ಯುವ ಜನತೆ ಮಾಡಬೇಕಾದಂತಹ ದೇಶ ಸೇವೆ ಮತ್ತು ಪಾಲಿಸಬೇಕಾದ ಕರ್ತವ್ಯಗಳನ್ನು ಮನಮುಟ್ಟುವಂತೆ ಮಾತಾಡಿದರು.
ಶಿಬಿರಾಧಿಕಾರಿ ಪ್ರೊ.ಹೈದರಾಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ
ಡಾ.ವೈಶಾಲಿ ಯು. ವಾರ್ಷಿಕ ವಿಶೇಷ ಶಿಬಿರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವನ್ನು ತಿಳಿಸಿದರು.