2:25 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ವಾರದಲ್ಲಿ 5 ದಿನ ಕೆಲಸ: ರಾಜ್ಯ ಸರಕಾರದಿಂದ ಆದೇಶ ವಾಪಸ್; ವಾರಂತ್ಯದಲ್ಲಿ ಎಲ್ಲ ಸರಕಾರಿ ಕಚೇರಿ ಓಪನ್

27/01/2022, 22:47

ಬೆಂಗಳೂರು(reporterkarnataka.com): ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು.

ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ದಿನಾಂಕ 04-01-2022ರಂದು ಎಲ್ಲಾ ಕಚೇರಿಗಳು ವಾರದಲ್ಲಿ ಐದು ದಿನ ಸೋಮವಾರದಿಂದ ಶುಕ್ರವಾರದ ವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿತ್ತು. ಈ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನಲೆಯಲ್ಲಿ ವಾರಾಂತ್ಯದಲ್ಲಿ ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಸುವಂತೆ ಸೂಚಿಸಿದ್ದಾರೆ. ಈ ಮೂಲಕ ವಾರದ 6 ದಿನ ಕೆಲಸ ನಿರ್ವಹಿಸೋದಕ್ಕೆ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು