2:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಡಾ.ಸೌಂದರ್ಯ ಆತ್ಮಹತ್ಯೆ ! ; ಕಾರಣ ಏನು ?

28/01/2022, 14:41

ಬೆಂಗಳೂರು (Reporterkarnataka.com): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಅವರು ವಸಂತನಗರದಲ್ಲಿರುವ ಮೌಂಟ್ ಕಾರ್ಮೆಲ್ ಕಾಲೇಜು ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

ಸೌಂದರ್ಯ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. 2018ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮರಿಸ್ವಾಮಿ ಅಣ್ಣನ ಮಗ ಡಾ. ನೀರಜ್‌ ಅವರನ್ನು ಸೌಂದರ್ಯ ಮದುವೆಯಾಗಿದ್ದರು. ಮೃತ ಸೌಂದರ್ಯಗೆ ಒಂದು ಮಗು ಇದೆ.

ಸೌಂದರ್ಯ ಪತಿ ನೀರಜ್ ಬೆಳಗ್ಗೆ 8 ಗಂಟೆಗೆ ಕೆಲಸಕ್ಕೆ ಹೋಗಿದ್ದರು. ಇತ್ತ ಸೌಂದರ್ಯ 10 ಗಂಟೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಕೆಲಸದವರು ಬಂದಾಗ ಬಾಗಿಲು ತೆಗೆಯದಿದ್ದಾಗ ಸೌಂದರ್ಯ ಪತಿ ಡಾ. ನೀರಜ್‌ಗೆ ಕೆಲಸದವರು ಕರೆ ಮಾಡಿದ್ದರು. ಮನೆ ಕೆಲಸದವರು ಫೋನ್ ಮಾಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ.
ನಿಖರವಾದ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು