2:47 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು

29/01/2022, 15:19

ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ.
ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ.

ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೊ(22) ಅವರು ಆತ್ಮಹತ್ಯೆಗೆ ಯತ್ನಿಸಿ ಸೋಮೇಶ್ವರದಲ್ಲಿ ಶುಕ್ರವಾರ ಸಂಜೆ ಸಮುದ್ರಕ್ಕೆ ಹಾರಿದ್ದರು. ಇದನ್ನು ತಡೆಯಲು ನೀರಿಗೆ ಹಾರಿದ ಲಾಯ್ಡ್ ಸಾವನ್ನಪ್ಪಿದ್ದಾರೆ. ಕರಾವಳಿ ಕಾವಲು ಪಡೆಯವರು ಯುವತಿಯನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.
ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಲಾಯ್ಡ್ ಡಿಸೋಜ ಮತ್ತು ಅಶ್ವಿತಾ ಹಲವು ವರುಷಗಳಿಂದ ಪರಸ್ಪರ ಪ್ರೇಮಿಸುತ್ತಿದ್ದರಂತೆ. ಈ ನಡುವೆ ಲಾಯ್ಡ್ ಅವರಿಗೆ ಬೇರೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಇದೆ ಎಂಬುದು ಅಶ್ವಿತಾ ಆರೋಪಿಸಿದ್ದರು.
ಇದರ ಕುರಿತು ಮಾತುಕತೆಗಾಗಿ ಶುಕ್ರವಾರ ಸಂಜೆ ಪ್ರೇಮಿಗಳಿಬ್ಬರು ಸೋಮೇಶ್ವರ ಕಡಲ ಕಿನಾರೆಯಲ್ಲಿ‌ ಸೇರಿದ್ದಾರೆ. ಮಾತುಕತೆ ವೇಳೆ ಅಶ್ವಿತಾ ಬೇಸರಗೊಂಡು ಏಕಾಏಕಿ‌ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿದ್ದರೆನ್ನಲಾಗಿದೆ. ಅವರನ್ನು ರಕ್ಷಿಸಲೆಂದು ಲಾಯ್ಡ್ ಕೂಡಾ ಸಮುದ್ರಕ್ಕೆ ಜಿಗಿದಿದ್ದಾರೆ. ಆದರೆ ಅವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅಶ್ವಿತಾ ರಕ್ಷಿಸಲ್ಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರಾವಳಿ ಕಾವಲು ಪಡೆಯ ಮೋಹನ್ ಚಂದ್ರ, ಸುಜಿತ್, ಅಶೋಕ್ ಸೋಮೇಶ್ವರ, ಮೀನುಗಾರರಾದ ಕಲ್ಪೇಶ್ ಹಾಗೂ ಗಿರೀಶ್ ಸಮುದ್ರಪಾಲಾದವರನ್ನು ಹರಸಾಹಸಪಟ್ಟು ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಅಷ್ಟರಲ್ಲಿ ಲಾಯ್ಡ್ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು