6:01 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ

ಇತ್ತೀಚಿನ ಸುದ್ದಿ

ಸರಕಾರದ ಯೋಜನೆಗಳನ್ನು ಪಾರದರ್ಶಕವಾಗಿ ಜನರಿಗೆ ತಲುಪಿಸಿ: ಕೋಲಾರ ಉಸ್ತುವಾರಿ ಸಚಿವ ಮುನಿರತ್ನ 

29/01/2022, 22:05

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಸರ್ಕಾರವು ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು , ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ಮಾಡಬೇಕು ಎಂದು ತೋಟಗಾರಿಕೆ ಮತ್ತು ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ  ಹೇಳಿದರು .

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರಿಗೆ ಸೇವೆ ಮಾಡುವ ಮನೋಭಾವವನ್ನು ಅಧಿಕಾರಿಗಳು ಇಟ್ಟುಕೊಳ್ಳಬೇಕು. ಕಷ್ಟದಲ್ಲಿರುವ ಪ್ರತಿಯೊಬ್ಬರಿಗೂ ಪ್ರೋತ್ಸಾಹ ನೀಡುವುದು ಸರ್ಕಾರದ ಜವಬ್ದಾರಿ ಅದನ್ನು ನಾವು ಮಾಡುತ್ತೇವೆ. ಕಾಮಗಾರಿಗಳಲ್ಲಿ ಗುಣಮಟ್ಟ ಹಾಗೂ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಬೇಕು . ಮುಂದಿನ ದಿನಗಳಲ್ಲಿ ಪ್ರತಿಯೊಂದು ಇಲಾಖೆಯನ್ನು ಕುಲಂಕುಶವಾಗಿ ಪರಿಶೀಲನೆ ಮಾಡಿ ಜಿಲ್ಲೆಗೆ ಬೇಕಾಗಿರುವ ಅನುದಾನವನ್ನು ಮುಂದಿನ ಬಾರಿಯ ಬಜೆಟ್‌ನಲ್ಲಿ ಕೊಡಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ವೆಂಕಟರಾಜು ಅವರು ಮಾತನಾಡಿ , ನಾವು ಆರ್ಥಿಕ ವರ್ಷದ ಕೊನೆಯಲ್ಲಿ ಇದ್ದೇವೆ. ಜಿಲ್ಲೆಗೆ ಬಂದಿರುವ ಅನುದಾನ ವಾಪಸ್ ಹೋಗದಂತೆ ಸದ್ಬಳಕೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು. 

ಸಭೆಯಲ್ಲಿ 25 ಕ್ಕೂ ಹೆಚ್ಚು ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆಗಳು ಪ್ರಗತಿ ವರಧಿಯನ್ನು ಸಂಕ್ಷಿಪ್ತವಾಗಿ ಸಭೆಯಲ್ಲಿ ವಿವರಿಸಿದರು. 

ಸಭೆಯಲ್ಲಿ ಕೋಲಾರ ಸಂಸದ ಎಸ್.ಮುನಿಸ್ವಾಮಿ , ಕೋಲಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಿ.ದೇವರಾಜ್ , ಅಪರ ಜಿಲ್ಲಾಧಿಕಾರಿ ಡಾ. ಸ್ನೇಹಾ , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ , ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಸಂಜೀವಪ್ಪ , ಉಪ ವಿಭಾಗಾಧಿಕಾರಿಗಳಾದ ಆನಂದ್ ಪ್ರಕಾಶ್ ಮೀನಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು