3:50 PM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ಗಣಕ ಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರ ಸುತ್ತಮುತ್ತ ನಿಷೇಧಾಜ್ಞೆ: ವಿಜಯಪುರ ಜಿಲ್ಲಾಧಿಕಾರಿ ಸುನಿಲ್ ಕುಮಾರ್ ಆದೇಶ

30/01/2022, 10:31

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜನವರಿ 31ರಿಂದ ಫೆಬ್ರವರಿ 7ರ ವರೆಗೆ ನಡೆಯಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧ ಹೇರಲಾಗಿದೆ.

ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ ನಡೆಯಲಿದೆ. ಸಿಆರ್‌ಪಿಸಿ 1674ರ ಕಲಂ 144ರ ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. 

ಈ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ಅಂಗಡಿಗಳು, ಕಂಪ್ಯೂಟರ್ ಸೆಂಟರಗಳು, ಸೈಬರ್ ಕೆಫೆಗಳು,ಕೋಚಿಂಗ್ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಆದೇಶಿಸಿದ್ದಾರೆ.

ಅದರಂತೆ ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನನ್ನು ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದ್ದು, ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಮೊಬೈಲ್ ಸೆಟ್‌ನ್ನು ಮಾತ್ರ ಬಳಸಬಹುದಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು