8:14 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತಹಶೀಲ್ದಾರ್ ವಾಹನ ಚಾಲಕ ಆತ್ಮಹತ್ಯೆ: ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತದಿಂದ 8 ಲಕ್ಷ ರೂ. ಪರಿಹಾರ ಪ್ರಕಟ 

31/01/2022, 13:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ತಹಶೀಲ್ದಾರರ ವಾಹನ  ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ,ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ ಕೊನೆಗೂ 8 ಲಕ್ಷ ರೂ. ಪರಿಹಾರ ಪ್ರಕಟಿಸಿದೆ .

ಅಕ್ರಮ ಸಕ್ರಮ ಸಾಗುವಳಿ ಪತ್ರ ನೀಡಿಕೆ ಹಗರಣದಲ್ಲಿ ಒತ್ತಡ -ಮಾನಸಿಕ ಆಘಾತ- ಕಿರುಕುಳಕ್ಕೆ ಬೇಸತ್ತು ಜೀಪ್ ಚಾಲಕ ಈ  ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಹೆಗ್ತೂರು ವಿಜೇತ್ ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದ.

ಶವವನ್ನು ಮರಣೋತ್ತರ ಪರೀಕ್ಷೆಗೆ ತಂದ ಸಂದರ್ಭದಲ್ಲಿ  ಶೃಂಗೇರಿಯ ಮುಖ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನಾಗರಿಕರು ಸ್ಥಳಕ್ಕೆ ಅಧಿಕಾರಿಗಳು ಬರಲು  ವಿಳಂಬ ಮಾಡಿದ ಕ್ರಮ ಆಕ್ಷೇಪಿಸಿ ತರಾಟೆಗೆ ತೆಗೆದುಕೊಂಡರು ಜಿಲ್ಲಾಧಿಕಾರಿಗಳು ಬರುವಂತೆ ಪಟ್ಟು ಹಿಡಿದಿದ್ದರು .

ಶವದ ಮರಣೋತ್ತರ ಪರೀಕ್ಷೆ ಬಳಿಕ ರಸ್ತೆ ಮಧ್ಯೆ ಶವವನ್ನು ಇಟ್ಟು ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು .

ಸ್ಥಳಕ್ಕೆ ಭೇಟಿ ನೀಡಿದ ಕಂದಾಯ ಉಪವಿಭಾಗಾಧಿಕಾರಿ ನಾಗರಾಜ್ ,ಪ್ರತಿಭಟನಾನಿರತರ ಮನವೊಲಿಸಿ 8 ಲಕ್ಷ ರೂ ಪರಿಹಾರ ಪ್ರಕಟಿಸಿದೆ ಅಲ್ಲದೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು .

ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈಬಿಟ್ಟು ಸ್ವಗ್ರಾಮಕ್ಕೆ ಪಾರ್ಥಿವ ಶರೀರರವನ್ನು ತೆಗೆದುಕೊಂಡು ಹೋಗಲಾಯಿತು .

ಈ ನಡುವೆ ಡೆತ್ ನೋಟ್ ಆಧರಿಸಿ ಕಛೇರಿಯಲ್ಲಿ ಪ್ರಥಮ ದರ್ಜೆ ಗುಮಾಸ್ತ  ಶರತ್ ಹಾಗೂ  ಶಿರಸ್ತೆದಾರ್ ರಾಘವೇಂದ್ರ ಹಾಗೂ ನಾಗೇಂದ್ರರನ್ನು ವಶಕ್ಕೆ ಪಡೆದು ಪೋಲಿಸರು  ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ತಹಸೀಲ್ದಾರ್ ಅಂಬುಜಾ ಎಸಿಬಿ ಬಲೆಗೆ ಬಿದ್ದು ಅಮಾನತು ನಿರೀಕ್ಷೆಯಲ್ಲಿದ್ದಾರೆ . ಎಸಿಬಿ ಬಲೆಗೆ ಬಿದ್ದಿದ್ದ ಸಿದ್ಧಪ್ಪ ನನ್ನು ಅಮಾನತು ಮಾಡಿದ ಜಿಲ್ಲಾಡಳಿತ ನಂತರದ ದಿನಗಳಲ್ಲಿ ಅಕ್ರಮ ಸಕ್ರಮ ಸಾಗುವಳಿ ಚೀಟಿ ಹಗರಣ ಸಂಬಂಧ  ಸತೀಶ್ , ಶಿವಕುಮಾರ್ ,ಸಂದೀಪ್ ರನ್ನು ಅಮಾನತು ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು