9:36 AM Wednesday27 - November 2024
ಬ್ರೇಕಿಂಗ್ ನ್ಯೂಸ್
ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ…

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು