6:38 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಹೊಳೆಕೂಡಿಗೆಯಲ್ಲಿ ಕಾಡಾನೆ ದಾಳಿ: ಅಪಾರ ಪ್ರಮಾಣದಲ್ಲಿ ಬೆಳೆಹಾನಿ; ಕಾಫಿ, ಬಾಳೆ ನೆಲಸಮ

04/02/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಹೊಳೆಕೂಡಿಗೆ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ.

ಕಾಡಾನೆ, ನೂರಾರು ಬಾಳೆಗಿಡಗಳನ್ನು ತುಳಿದು ನಜ್ಜುಗುಜ್ಜಾಗಿಸಿದ್ದು ಕಾಫಿಗಿಡಗಳನ್ನು ಮುರಿದು ಹಾಕಿದೆ. ಗಿಡನೆಟ್ಟು ಫಲಸು ಕೈ ಸೇರುವ ವೇಳೆಗೆ ಕಾಡಾನೆ ದಾಲಿ ಮಾಡಿ ಬೆಳೆ ಹಾನಿ ಮಾಡಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೊಳೆಕೂಡಿಗೆ ಗ್ರಾಮದ ಬಾಸಮ್ಮ, ರಮೇಶ್‌ಗೌಡ, ಲಕ್ಷö್ಮಣಗೌಡ, ಸತೀಶ್‌ಗೌಡ ಎಂಬುವವರಿಗೆ ಸೇರಿದ ಕೃಷಿಭೂಮಿಗೆ ನುಗ್ಗಿ ಕಾಡಾನೆ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದೆ.

ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿಗಳಾದ ರಂಗನಾಥ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದು ಕಾಡಾನೆ ದಾಳಿಯಿಂದ ಬೆಳೆಹನಿಯಾಗಿರುವ ಬಗ್ಗೆ ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು