11:17 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಜಾಬ್ ಗಾಗಿ ಕಾಲೇಜಿಗೆ ಬನ್ನಿ, ಹಿಜಾಬ್, ಟೋಪಿ ಹಾಕಿಕೊಂಡು ಮದ್ರಸಾಗೆ ಹೋಗಿ: ಸಂಸದ ಪ್ರತಾಪ್‌ ಸಿಂಹ

05/02/2022, 18:01

ಮೈಸೂರು(reporterkarnataka.com): ಎಲ್ಲರೂ ಕಾಲೇಜಿಗೆ ‘ಜಾಬ್’ ಗಾಗಿ ಬರುತ್ತಾರೆ, ಆದರೆ ನೀವು ‘ಹಿಜಾಬ್’ ಗಾಗಿ ಬರುತ್ತೀದ್ದೀರಾ? ಹಿಜಾಬ್ ಹಾಕಿಕೊಂಡು, ಟೋಪಿ ಹಾಕಿಕೊಂಡು ನೀವು ಕಲಿಯಬೇಕು ಎಂಬುದಾದರೆ ಮದರಸಗೆ ಹೋಗಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮಾಧ್ಯಮದ ಜತೆ ಮಾತನಾಡಿದ ಅವರು, ಎಲ್ಲ ತರಹದ ಒತ್ತಡ, ಟೀಕಾ ಪ್ರಹಾರದ ನಡುವೆಯೂ ಸಮವಸ್ತ್ರ ಕಡ್ಡಾಯಕ್ಕೆ ಸರಕಾರ ಬದ್ಧವಾಗಿರುವುದು ಒಳ್ಳೆಯ ಸಂದೇಶ. ಹಿಜಾಬ್ ಗಾಗಿ ಇಷ್ಟು ಹಠ ಹಿಡಿದು ಯಾಕಾಗಿ ವಿದ್ಯಾರ್ಥಿಗಳು ಕೂತಿದ್ದಾರೆ. ಸಮವಸ್ತ್ರ ಎನ್ನುವುದು ಬರೀ ಬಣ್ಣದ ಉಡುಪಲ್ಲ. ಅದು ಎಲ್ಲಾ ಮಕ್ಕಳು ಸಮಾನರು ಎಂದು ಸಾರುವ ಉಡುಪು. ಮದರಸದಲ್ಲಿ ನಿಮ್ಮ ಪ್ರತ್ಯೇಕ ಭಾವನೆ ಕಾಪಾಡಿಕೊಳ್ಳಬಹುದು. ಆದರೆ ಸರ್ಕಾರಿ ಶಾಲೆಗಳಲ್ಲಿ ಈ ಪ್ರತ್ಯೇಕತೆ ಸಾಧ್ಯವಿಲ್ಲ. ಇದು ಬ್ರಿಟಿಷರ ಭಾರತವಲ್ಲ, ಇದು ಭರತ ಖಂಡ ಎಂದರು.

ಹಿಂದೂ ಧರ್ಮದ ಬುನಾದಿ ಮೇಲಿರುವ ದೇಶವಿದು. ಇಲ್ಲಿ ಗಣಪತಿ ಪೂಜೆ, ಹೆಣ್ಣು ಮಕ್ಕಳ ಕುಂಕುಮ ಸಂಸ್ಕೃತಿಯ ಭಾಗ. ಇದನ್ನು ಯಾರು ಪ್ರಶ್ನಿಸುವಂತಿಲ್ಲ. ಇಸ್ಲಾಂ- ಕ್ರಿಶ್ಚಿಯನ್ ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಒಪ್ಪಿಕೊಳ್ಳಬೇಕು. ಕ್ರಿಶ್ಚಿಯನ್, ಇಸ್ಲಾಂ ಧರ್ಮದ ಹೇರಿಕೆ ಇಲ್ಲಿ ನಡೆಯುವುದಿಲ್ಲ. ಈ ನೆಲದ ಸಂಸ್ಕೃತಿಯನ್ನು ಕ್ರಿಶ್ಚಿಯನ್, ಇಸ್ಲಾಂ ಧರ್ಮಗಳು ಒಪ್ಪಿಕೊಳ್ಳಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು