8:45 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕುಂದಾಪುರ ಸರಕಾರಿ ಕಾಲೇಜಿನಲ್ಲಿ ಹಿಜಾಬ್, ಕೇಸರಿ ಶಾಲು ಎರಡಕ್ಕೂ ಬ್ಯಾನ್’:  ಎಸ್ ಡಿಎಂಸಿ ನಿರ್ಧಾರ

05/02/2022, 18:35

ಕುಂದಾಪುರ(reporterkarnataka.com): ಹಿಜಾಬ್ ಹಾಗೂ ಕೇಸರಿ ಶಾಲು ಗಲಾಟೆ ಜಿಲ್ಲೆಯಲ್ಲಿ ವೇಗವಾಗಿ ಪಸರಿಸುತ್ತಿದ್ದು, ಉಡುಪಿ ಸರಕಾರಿ ಕಾಲೇಜಿನಿಂದ ಕುಂದಾಪುರ ಸರಕಾರಿ ಕಾಲೇಜಿಗೂ ತಟ್ಟಿದೆ. ಮೊದಲು ಹುಡುಗರು ಕೇಸರಿ ಶಾಲು ಹಾಕಿದರೆ, ಇಂದು ಹುಡುಗಿಯರೂ ಕೇಸರಿ ಶಾಲು ಧರಿಸಿದ್ದಾರೆ. ಈ ಮಧ್ಯೆ ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಗೂ ಕೇಸರಿ ಶಾಲು ಎರಡಕ್ಕೂ ಬ್ಯಾನ್ ಹಾಕಲು ತೀರ್ಮಾನಿಸಿದೆ.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಆಡಳಿತ ಮಂಡಳಿ ಸಭೆ ಇಂದು ನಡೆದಿದ್ದು, ಈ ಸಭೆಯಲ್ಲಿ ನಿರ್ಧಾರವಾದಂತೆ, ತರಗತಿಯೊಳಗೆ ಧಾರ್ಮಿಕತೆಗೆ ಅವಕಾಶವಿಲ್ಲ. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ತರಗತಿಗೆ ಯಾರೂ ಬರುವಂತಿಲ್ಲ. ಸೋಮವಾರದಿಂದ ಕಾಲೇಜಿನ ನಿಯಮ ಪಾಲಿಸಿ ಕಾಲೇಜಿಗೆ ಬರುವವರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಕಾಲೇಜು ಗೇಟ್ ತನಕ ಯಾವುದೇ ವಸ್ತ್ರ ಧರಿಸಿ ಬರಬಹುದು ಆದರೆ ತರಗತಿಗೆ ಪ್ರವೇಶಿಸುವಾಗ ಹಿಜಾಬ್ ಅಥವಾ ಕೇಸರಿ ಶಾಲಿಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸದಸ್ಯ ಮೋಹನದಾಸ ಶೆಣೈ ಹೇಳಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು