5:52 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದ: ನಾಳೆ ಉಪ ಸಮಿತಿ ಭೇಟಿ

06/02/2022, 10:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪುಟದ ಉಪಸಮಿತಿ ಭೇಟಿ ನೀಡಲಿದೆ.

ಕಾನೂನು ಸಚಿವ ಮಾಧುಸ್ವಾಮಿ, ಮುಜರಾಯಿ ಸಚಿವೆ ಶಶಿಕಲಾ ಜೋಲ್ಲೆ,  ಸಚಿವ ಅಂಗಾರ ನೇತೃತ್ವದ ಉಪಸಮಿತಿಯನ್ನು ರಚಿಸಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರಿಂದ‌ ಲಿಖಿತ ಅಹವಾಲನ್ನು ಉಪ ಸಮಿತಿಯಿ ಸ್ವೀಕರಿಸಲಿದೆ.
ಅರ್ಚಕರ ನೇಮಕ ಸಂಬಂಧ ಅಗತ್ಯ ಕ್ರಮ‌ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ 7 ರಂದು ಚಿಕ್ಕಮಗಳೂರಿಗೆ ಆಗಮಿಸಲಿರುವ ಉಪ ಸಮಿತಿ ಆಗಮಿಸಲಿದೆ. ವಿಶ್ರಾಂತ ಜಡ್ಜ್ ನಾಗಮೋಹನದಾಸ್ ಕಮಿಟಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿತ್ತು.

ಕಮಿಟಿ ಮುಜಾವರ್ ನೇಮಕ ಸಂಬಂಧಿಸಿದಂತೆ ವರದಿಯನ್ನು ಸರ್ಕಾರಕ್ಕೆ‌ ನೀಡಿತು. ಇದನ್ನ ಪ್ರಶ್ನಿಸಿ ಹಿಂದೂಪರ ಸಂಘಟನೆಗಳಿಂದ ಹೈಕೋರ್ಟ್ ಮೊರೆ ಹೋಗಿವೆ. ಈ ಹಿನ್ನೆಲೆಯಲ್ಲಿ ಎರಡು ಸಮುದಾಯದ ಅವಾಹಲು ಸ್ವೀಕರಿಸಲು ಹೈಕೋರ್ಟ್ ಆದೇಶ ನೀಡಿತ್ತು.

ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು