9:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಎಬಿವಿಪಿ ಬಂಟ್ವಾಳ ತಾಲೂಕು ಅಭ್ಯಾಸ ವರ್ಗ: ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಗೆ ಸನ್ಮಾನ

06/02/2022, 12:34

ಮಂಗಳೂರು(reporterkarnataka.com): ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ತಾಲೂಕು ಅಭ್ಯಾಸ ವರ್ಗವು ಫೆಬ್ರವರಿ 5 ರಂದು ಬಿ.ಸಿ. ರೋಡಿನ ಗೀತಾಂಜಲಿ ಸಭಾ ಭವನದಲ್ಲಿ ಜರುಗಿತು.


ಕಾರ್ಯಕ್ರವನ್ನು ಮಂಗಳೂರು ಇಂಡಿಯಾನಾ ಹಾಸ್ಪಿಟಲ್ ಫಿಸಿಯೋಥರಪಿ ವಿಭಾಗದ ಮುಖ್ಯಸ್ಥ ಹಾಗೂ ಮಾಜಿ ಯೋಧ ಡಾ. ವೆಂಕಟೇಶ್ ಕುಂಪಲ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಪರಿಷತ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಅವರನ್ನು ವಿದ್ಯಾರ್ಥಿ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ, ವಿಭಾಗ ಸಂಚಾಲಕ ಹರ್ಷಿತ್ ಕೊಯಿಲ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಲಕ್ಷ್ಮೀ ಮಠದಮೂಲೆ, ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.

ಅಭ್ಯಾಸ ವರ್ಗದ ಮೊದಲ ಅವಧಿಯಾದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ರಾಜ್ಯ ಸಹ ಕಾರ್ಯದರ್ಶಿ ಮಣಿಕಂಠ ಕಳಸ ಇವರ ನಡೆಸಿಕೊಟ್ಟರು.

ಎರಡನೇ ಅವಧಿ ಕ್ಯಾಂಪಸ್ ಕಾರ್ಯ ಮತ್ತು ನೇತೃತ್ವವನ್ನು ಹಿರಿಯ ಕಾರ್ಯಕರ್ತರಾದ ಸಂದೇಶ್ ರೈ ಮಜಕ್ಕಾರ್ ಅವರು ನಡೆಸಿಕೊಟ್ಟರು. 

ಅಭ್ಯಾಸ ವರ್ಗದ ಮೂರನೇ ಅವಧಿ ಹೋರಾಟವನ್ನು ಚಟುವಟಿಕೆಗಳ ಮೂಲಕ ಪ್ರಾತ್ಯಕ್ಷಿಕೆಯ ಮೂಲಕ ಮಂಗಳೂರು ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನಡೆಸಿಕೊಟ್ಟರು. 

ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 

ಎಬಿವಿಪಿ ಜಿಲ್ಲಾ ಸಂಚಾಲಕ ನಿಶಾನ್ ಆಳ್ವ ನೂತನ ತಾಲೂಕು ತಂಡ ಮತ್ತು ನಗರ ತಂಡಗಳ ಜವಾಬ್ದಾರಿ ಘೋಷಣೆ ಮಾಡಿದರು. 


ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಸಂಚಾಲಕ ದಿನೇಶ್ ಕೊಯಿಲ, ಸಹ ಸಂಚಾಲಕ ಅಖಿಲೇಶ್ ಉಪಸ್ಥಿತರಿದ್ದರು. ಸಿದ್ದಕಟ್ಟೆ ನಗರ ಕಾರ್ಯದರ್ಶಿ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು