3:55 PM Thursday10 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ: ಬ್ಯಾರಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಗೆ ಜೀವ ಬೆದರಿಕೆ

07/02/2022, 09:30

ಮಂಗಳೂರು(reporterkarnataka.com): ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ನಿಯಮವನ್ನು ಜಾರಿಗೊಳಿಸಿದೆ. ಸರ್ಕಾರ ಜಾರಿ ಮಾಡಿರುವ ಈ ಸಮವಸ್ತ್ರ ಸಮರ್ಥಿಸಿಕೊಂಡಿದ್ದಾರೆ. ಇದಾದ ಬಳಿಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಅವರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ.

ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ನಡೆಯುತ್ತಿರುವ ಮಾಧ್ಯಮ ಚರ್ಚೆ ವೇಳೆ ರಹೀಂ ಉಚ್ಚಿಲ್ ಅವರು ಸರಕಾರದ ನಿಲುವನ್ನು ಬೆಂಬಲಿಸಿದ್ದರು. ಈ ಕಾರಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬಫೆ.4ರಂದು ಮಧಾಹ್ನ 2.56 ಕ್ಕೆ ರಹೀಂ ಉಚ್ಚಿಲರಿಗೆ ಕರೆ ಮಾಡಿ, ಉಚ್ಚಿಲ್ ಹಾಗೂ ಕುಟುಂಬವನ್ನು ನಿಂದಿಸಿ ಜೀವಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ರಹೀಂ ಉಚ್ಚಿಲ್, ಈ ಬಗ್ಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ರಹೀಂ ಉಚ್ಚಿಲ್ ಮೇಲೆ ಈ ಹಿಂದೆ ಮಾರಣಾಂತಿಕ ಹಲ್ಲೆ ನಡೆದಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು